ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇವನಹಳ್ಳಿ | ಬಾಲ್ಯ ವಿವಾಹಕ್ಕೆ ತಡೆ

Published 16 ಮೇ 2024, 15:30 IST
Last Updated 16 ಮೇ 2024, 15:30 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಕಲ್ಯಾಣಮಂಟಪವೊಂದರಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ನಿಲ್ಲಿಸಿದ್ದಾರೆ.

21 ವರ್ಷದ ವರನಿಗೆ 17 ವರ್ಷದ ಬಾಲಕಿಯೊಂದಿಗೆ ವಿವಾಹ ನಿಶ್ಚಿಯವಾಗಿತ್ತು. ಮಕ್ಕಳ ರಕ್ಷಣಾ ಘಟಕಕ್ಕೆ ಸಿಕ್ಕಿದ್ದ ಮಾಹಿತಿ ಆಧಾರಿಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾಲಕ್ಷ್ಮೀ ಅವರ ಮಾರ್ಗದರ್ಶನದಲ್ಲಿ ಗುರುವಾರ ಕಲ್ಯಾಣಮಂಟಪವೊಂದಕ್ಕೆ ಬಂದ ಅಧಿಕಾರಿಗಳು ಮದುವೆ ನಿಲ್ಲಿಸಿದರು.

ಮಕ್ಕಳ ಕಲ್ಯಾಣ ಘಟಕದ ಅಧಿಕಾರಿ, ಮಕ್ಕಳ ಸಹಾಯವಾಣಿ, ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ, ವಧು ಮತ್ತು ವರನ ಕಡೆಯವರೆಗೆ ಎಚ್ಚರಿಕೆ ನೀಡಿ, ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಳ್ಳುವ ತನಕ ಮದುವೆ ಮಾಡುವಂತಿಲ್ಲ. ಕಾನೂನಿಗೆ ವಿರುದ್ಧವಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದು, ಮದುವೆ ನಿಲ್ಲಿಸಿದ್ದಾರೆ.

ವಧು ಮತ್ತು ವರನ ಕಡೆಯವರನ್ನು ಮೇ 17 ರಂದು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಶ್ರೀಧರ್, ಮಕ್ಕಳ ಸಹಾಯವಾಣಿಯ ಸಂಯೋಜಕ ಶ್ರೀನಿವಾಸ್, ಮೇಲ್ವಿಚಾರಕಿ ಸೌಮ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಲಲಿತಮ್ಮ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT