ವಿಜಯಪುರ (ದೇವನಹಳ್ಳಿ): ಇಲ್ಲಿನ ಪುರಸಭೆ ಕಾರ್ಯಾಲಯದಲ್ಲಿ ಶುಕ್ರವಾರ ಭಗವಾನ್ ಗೌತಮ ಬುದ್ಧ ಜಯಂತಿಯನ್ನು ಆಚರಿಸಲಾಯಿತು.

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಗೌತಮ ಬುದ್ಧನ ತತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿ ಬೇಕಾಗಿದ್ದು, ಶಾಂತಿ, ಅಹಿಂಸೆ, ಧ್ಯಾನ ಮತ್ತು ಸಮಾನತೆಯ ಸಂದೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್ ತಿಳಿಸಿದರು.

‘ಆಸೆಯೇ ದುಃಖಕ್ಕೆ ಮೂಲ' ಎಂಬುದು ಬೌದ್ಧ ಧರ್ಮದ ಪ್ರಮುಖ ಬೋಧನೆಯಾಗಿದೆ. ಈಚೆಗೆ ರಿಯಲ್ ಎಸ್ಟೇಟ್ ಉದ್ಯಮ ಬೆಳೆಯುತ್ತಿದ್ದಂತೆ ಮನುಷ್ಯನಲ್ಲಿ ಮಾನವೀಯತೆಯ ಗುಣಗಳು ಮರೆಯಾಗುತ್ತಿದೆ. ಮಾನವ ಜನ್ಮ ದೊಡ್ಡದು. ಯಾವುದು ಶಾಶ್ವತವಲ್ಲ, ಪ್ರತಿಯೊಬ್ಬರು ಆಸೆಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಸರಳ ಜೀವನ ನಡೆಸಿದರೆ ಬದುಕು ಉತ್ತಮವಾಗಿರಲಿದೆ ಎಂದು ಪುರಸಭೆ ಸದಸ್ಯ ನಂದಕುಮಾರ್ ತಿಳಿಸಿದರು.

ಮಾನವೀಯತೆ, ಶಾಂತಿ, ಕರುಣೆ, ಸಹಬಾಳ್ವೆ, ಪ್ರೀತಿ, ವಾತ್ಸಲ್ಯ ಮತ್ತು ಸಹನೆಗೆ ಮಾರ್ಗದರ್ಶನ ನೀಡಿದ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು ನಾವೆಲ್ಲರೂ ಸಾಗೋಣ ಎಂದರು.

ಇಂದಿನ ಸಮಾಜದಲ್ಲಿ ಹಿಂಸೆ, ದ್ವೇಷ, ಅಸಹಿಷ್ಣುತೆ, ಹೆಚ್ಚುತ್ತಿರುವ ಸಂದರ್ಭದಲ್ಲಿ ಬುದ್ಧನ ಸಂದೇಶ ನಮಗೆ ಮಾರ್ಗದರ್ಶನ ನೀಡುತ್ತದೆ. ನಾವು ಪರಸ್ಪರ ಪ್ರೀತಿ, ಸಹಾನುಭೂತಿ ಮತ್ತು ಶಾಂತಿಯೊಳಗೆ ಬದುಕಬೇಕು ಎಂಬುದನ್ನು ಅವರು ನಮಗೆ ತಿಳಿಸಿಕೊಟ್ಟಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್ ತಿಳಿಸಿದರು.

ಪುರಸಭೆ ಸದಸ್ಯ ಎಂ.ನಾರಾಯಣಸ್ವಾಮಿ, ಪರಿಸರ ಎಂಜಿನಿಯರ್ ಶೇಖರ ರೆಡ್ಡಿ, ಆರೋಗ್ಯಾಧಿಕಾರಿ ಲಾವಣ್ಯ, ಶಿವನಾಗೇಗೌಡ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-15-739788998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.