ವಿಜಯಪುರ(ದೇವನಹಳ್ಳಿ): ಇಂದಿರಾನಗರದಲ್ಲಿ ಭಾನುವಾರ 68ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ತಂತ್ರಜ್ಞಾನದಲ್ಲಿ ಹೆಚ್ಚು ಕನ್ನಡ ಬಳಕೆಯಾಗಬೇಕು. ಆಗ ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ಕನ್ನಡವನ್ನು ಬೆಳಸಬಹುದು ಎಂದರು.

ಈ ಮಣ್ಣಿ ಮತ್ತು ನುಡಿಗೊಂದು ಸೊಗಸಿದೆ, ಸೌಂದರ್ಯವಿದೆ, ಬೆಡಗಿದೆ. ಈ ಪ್ರಾದೇಶಿಕ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಾರ್ಯವನ್ನು ಎಲ್ಲರು ಸೇರಿ ಮಾಡಬೇಕಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಬಾರಕ್ ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ಕನ್ನಡ ಹಿಂದುಳಿಯದಂತೆ ಸರ್ಕಾರವು ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕ, ಮೊಬೈಲ್‌ನಲ್ಲಿ ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿರುತ್ತದೆ ಎಂದು ಹೇಳಿದರು.

ಡಾ.ವಿಜಯಕುಮಾರ್, ಮಹಮದ್ ಜಬಿವುಲ್ಲಾ, ವಿಜಯಪುರ ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜ್, ಪುರಸಭೆ ಉಪಾಧ್ಯಕ್ಷ ಎಂ.ಕೇಶವಪ್ಪ, ಸದಸ್ಯ ಎಂ.ನಾರಾಯಣಸ್ವಾಮಿ, ಮುನಿರಾಜು, ರಘು, ಮಹೇಶ್, ಮುರಳಿ, ಹರೀಶ್, ಜಗನ್ನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.