ವಿಜಯಪುರ(ದೇವನಹಳ್ಳಿ): ಇಲ್ಲಿನ ಸಮೀಪದ ದೊಡ್ಡಮುದ್ದೇನಹಳ್ಳಿಯಲ್ಲಿ ಬುಧವಾರ ಸಂಜೆ ಬೀಸಿದ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ಸಾಲು, ಸಾಲಾಗಿ ಎಂಟು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಬಿದ್ದಿದೆ. ಇದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, 24 ತಾಸುಗಳಿಂದ ಗ್ರಾಮ ಕತ್ತಲಲ್ಲಿ ಮುಳುಗಿದೆ.

ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಬೇಸಿಗೆಯ ಸುಡು ಬಿಸಿಲಿನಲ್ಲಿ ಫ್ಯಾನ್ಗಳಿಲ್ಲದೆ ಜನರು ಧಗೆ ತಡೆಯದೆ ಪರದಾಡುತ್ತಿದ್ದಾರೆ. ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಚಾರ್ಜ್ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಕೃಷಿ ಪಂಪ್ಸೆಟ್ಗಳು ಸ್ಥಗಿತಗೊಂಡಿವೆ.

ಬೇಸಿಗೆಯಲ್ಲಿ ನೀರಿಲ್ಲದೆ ಬೆಳೆಗಳು ಬಾಡುತ್ತಿವೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಜಾನುವಾರುಗಳಿಗೆ ನೀರು ಪೂರೈಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಸ್ಕಾಂ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಬಿದ್ದಿರುವ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಸರಬರಾಜನ್ನು ಸುಗಮಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-15-214381463

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.