ವಿಜಯಪುರ (ದೇವನಹಳ್ಳಿ): ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಸಿ.ಎನ್.ಜಿ, ಅಡುಗೆ ಅನಿಲ ದರ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕೂಡಲೇ ದರ ಇಳಿಕೆಗೆ ಕ್ರಮಕೈಗೊಳ್ಳಬೇಕು ಎಂದು ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್ ಆಗ್ರಹಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 10-12 ದಿನಗಳಲ್ಲಿ ಕೇಂದ್ರ 5 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದೆ. ಆಟೊ ಹಾಗೂ ಕ್ಯಾಬ್ ಚಾಲಕರು ಇದರಿಂದ ತತ್ತರಿಸಿದ್ದಾರೆ. ಅಡುಗೆ ಅನಿಲ ಏರಿಕೆಯಿಂದ ಹೋಟೆಲ್ ಉದ್ಯಮ ಕೂಡ ಸಂಕಷ್ಟದಲ್ಲಿದೆ ಎಂದು ಆರೋಪಿಸಿದರು. ಪಶ್ಚಿಮ ಏಷ್ಯಾದ ಯುದ್ಧ ಕಾರಣದಿಂದ ಕಚ್ಚಾ ತೈಲದ ಬೆಲೆ ಏರಿಕೆಯಾಗಿದೆ. ಈ ಏರಿಕೆಗೆ ತಕ್ಕಂತೆ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡಿದೆ ಎಂಬುದಾಗಿ ಕೇಂದ್ರ ಸರ್ಕಾರ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಬಿಜೆಪಿ ಸರ್ಕಾರ ಬಂದರೆ ಅಚ್ಚೇದಿನ್ ಎಂದಿದ್ದರು. ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನ ದುಬಾರಿಯಾಗಿದೆ ಎಂದು ದೂರಿದರು.

ರಸಗೊಬ್ಬರ ಬೆಲೆ ಗಗನಕ್ಕೇರಿದೆ. ಎಫ್ಐಡಿ ಸಂಖ್ಯೆ ಇದ್ದರೆ ಮಾತ್ರವೇ ರಸಗೊಬ್ಬರ ನೀಡಬೇಕು ಎಂಬ ಕಾನೂನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-15-1716301740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.