ವಿಜಯಪುರ (ದೇವನಹಳ್ಳಿ): ಇಲ್ಲಿನ ಸಮೀಪದ ದೊಡ್ಡಮುದ್ದೇನಹಳ್ಳಿ ಗ್ರಾಮದಲ್ಲಿ ಸತ್ಯ ಎಜುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಮತ್ತು ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.

ರಕ್ತದಾನ ಶಿಬಿರದಲ್ಲಿ 11 ಯೂನಿಟ್ ರಕ್ತ ಸಂಗ್ರಹಿಸಲಾಯಿತು. 250ಕ್ಕೂ ಹೆಚ್ಚು ಮಂದಿಯ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಶಿಬಿರ ಉದ್ಘಾಟಿಸಿದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಗ್ರಾಮೀಣ ಭಾಗದ ಜನರು ಕಾಯಿಲೆ ಬಂದ ಮೇಲೆ ಚಿಕಿತ್ಸೆಗಾಗಿ ಪರದಾಡುವುದಕ್ಕಿಂತ ಕಾಯಿಲೆ ಬರುವ ಮುನ್ನವೇ ಮುನ್ನೆಚ್ಚರಿಕೆ ವಹಿಸಿದರೆ ಆಸ್ಪತ್ರೆಗಳ ಅಲೆದಾಟ ಹಾಗೂ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎಂದರು.

ದುಬಾರಿ ವೆಚ್ಚದ ನಗರದ ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಬದಲು, ತಮ್ಮ ಸ್ವಗ್ರಾಮಗಳಲ್ಲಿ ಸಿಗುವ ಇಂತಹ ಉಚಿತ ಸೇವೆಯನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಬಮೂಲ್ ಮಾಜಿ ನಿರ್ದೇಶಕ ದಂಡಿಗಾನಹಳ್ಳಿ ನಾರಾಯಣಸ್ವಾಮಿ, ಗ್ರಾ.ಪಂ ಸದಸ್ಯ ಎಂ.ಸತೀಶ, ದೊಡ್ಡ ಮುದ್ದೇನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಿ.ಬೈಯಣ್ಣ, ಡೇರಿ ಮಾಜಿ ಅಧ್ಯಕ್ಷ ಅಶೋಕ್, ಜೆಡಿಎಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಗೋಣೂರು ಮನೋಹರ್, ಆಕಾಶ್ ಆಸ್ಪತ್ರೆಯ ವ್ಯವಸ್ಥಾಪಕ ವಿ.ರಂಗನಾಥ್, ಮಲ್ಲಿಗೆ ಮಕ್ಕಳ ಆಸ್ಪತ್ರೆಯ ಡಾ. ವಿ.ಸಿ.ಮಂಜುನಾಥ್, ಮುಖಂಡರಾದ ಸುಬ್ಬಣ್ಣ, ಮುನಿನಾರಾಯಣಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-1214967457

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.