ವಿಜಯಪುರ (ದೇವನಹಳ್ಳಿ): ಪಟ್ಟಣದ ಸಾಯಿ ಜ್ಞಾನ ಗಂಗಾ ಪದವಿ ಕಾಲೇಜಿನಲ್ಲಿ ಕಸಾಪ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ವಿದ್ಯಾರ್ಥಿಗಳು ಕನ್ನಡ ಭಾಷೆ ಕಂಪು ಪಸರಿಸುವ ಕೆಲಸ ಮಾಡಬೇಕು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಆರ್.ಕೆ.ನಂಜೇಗೌಡ ತಿಳಿಸಿದರು.

ಕಸಾಪ ಸದಸ್ಯತ್ವದ ಶುಲ್ಕ ಅತ್ಯಂತ ಕಡಿಮೆ ಇದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ತಿಳಿಸಿದರು.

‘ನಮ್ಮ ಭಾಷೆ ಮತ್ತು ಸಂಸ್ಕೃತಿ ಶಕ್ತಿ ಪಾರವಾದುದು. ವಿದ್ಯಾರ್ಥಿಗಳು ದೈನಂದಿನ ವ್ಯವಹಾರದಲ್ಲಿ ಕನ್ನಡ ಪದ ಹಾಗೂ ಅಂಕೆ ಬಳಸುವ ಮೂಲಕ ಇತರರಿಗೆ ಪ್ರೇರಕರಾಗಬೇಕು’ ಎಂದು ಶಿಕ್ಷಕಿ ಸುಕನ್ಯಾ ಬೈರೇಗೌಡ ಹೇಳಿದರು.

ನೇಮಕ: ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ ಎನ್.ಸಿ.ಮನೋವೆಂಕಟರಮಣ, ಅಲ್ಪಸಂಖ್ಯಾತ ಘಟಕದ ಪ್ರತಿನಿಧಿಯಾಗಿ ಎಫ್.ಬಾಬಾಜಾನ್, ಗೌರವ ಕಾರ್ಯದರ್ಶಿ ವಿ.ಗೋವಿಂದರಾಜು, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ನರಸಿಂಹಮೂರ್ತಿ ಅವರನ್ನು ನೇಮಿಸಿ ಪ್ರಮಾಣ ಪತ್ರ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.