ವಿಜಯಪುರ (ದೇವನಹಳ್ಳಿ): ಇಲ್ಲಿನ ಸಮೀಪದ ಕೋರಮಂಗಲ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಸಿ.ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸುನೀಲ್ ಕುಮಾರ್ ಘೋಷಿಸಿದರು.

ಹಿಂದಿನ ಸಾಲಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಚನ್ನೇಗೌಡ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಸಿ.ದೇವರಾಜ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಎಂದು ಘೋಷಣೆ ಮಾಡಿರುವುದಾಗಿ ಅವರು ತಿಳಿಸಿದರು.ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್, ಬಯಪ್ಪ ಸದಸ್ಯ ವಿ.ರಾಮಚಂದ್ರಪ್ಪ, ವಿಜಯಪುರ ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜ್, ವೆಂಕಟಗಿರಿಕೋಟೆ ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಅಮರನಾಥ್, ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿ.ಶ್ರೀನಿವಾಸ್, ಪಿಡಿಒ ರಾಘವೇಂದ್ರ, ಕಾರ್ಯದರ್ಶಿ ನವೀನ್, ಉಪಾಧ್ಯಕ್ಷೆ ಕನಕರತ್ನಮ್ಮ, ಸದಸ್ಯರಾದ ಪುಷ್ಪ ಟಿ.ಶಿವರಾಜ್, ಹರೀಶ್ ಕುಮಾರ್, ಗಾಯಿತ್ರಿ, ಮಂಜುಳಾ, ಕರವಸೂಲಿಗಾರ ಗಂಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-2089608102

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.