ವಿಜಯಪುರ (ದೇವನಹಳ್ಳಿ): ಹೋಬಳಿಯ ಕೋರಮಂಗಲ ಗ್ರಾಮ ಪಂಚಾಯಿತಿಯು 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲೆ ಅತಿ ಹೆಚ್ಚು ತೆರಿಗೆ ಸಂಗ್ರಹಣೆ ವಸೂಲಿ ಮಾಡಿ ಗಣನೀಯವಾದ ಸಾಧನೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪ್ರಶಂಸಾ ಪತ್ರವನ್ನು ನೀಡಿ ಅಭಿನಂದಿಸಿದೆ.

2025-26 ನೇ ಸಾಲಿಗೆ ಪಂಚಾಯಿತಿಯಲ್ಲಿ ತಯಾರಿಸಿದ್ದ ಅಂದಾಜು ಬಜೆಟ್ ನಲ್ಲಿ ₹13,00,113 ತೆರಿಗೆ ಸಂಗ್ರಹ ಗುರಿ ಹೊಂದಿತ್ತು. ಮಾರ್ಚ್ 2026 ರವರೆಗೆ ₹17,32,464 ತೆರಿಗೆ ಸಂಗ್ರಹಿಸುವ ಮೂಲಕ ಶೇ 133.25 ರಷ್ಟು ಸಾಧನೆ ಮಾಡಿದೆ.

ಸಾರ್ವಜನಿಕರಿಂದ ಪೂರ್ಣ ಪ್ರಮಾಣದಲ್ಲಿ ತೆರಿಗೆ ಕಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಸಿಬ್ಬಂದಿ ಸಾಕಷ್ಟು ಬಾರಿ ಮನೆಗಳ ಬಳಿಗೆ ಸುತ್ತಬೇಕಾಗುತ್ತದೆ. ನಮ್ಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಆಯಾ ಗ್ರಾಮಗಳ ಜನಪ್ರತಿನಿಧಿಗಳ ಸಹಕಾರದಿಂದ ತೆರಿಗೆ ಸಂಗ್ರಹ ಮಾಡಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗುತ್ತದೆ ಎಂದು ಪಂಚಾಯಿತಿ ಅಧ್ಯಕ್ಷ ಸಿ.ದೇವರಾಜ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಪ್ರಶಂಸನಾ ಪತ್ರವನ್ನು ನೀಡಿರುವುದು ಖುಷಿ ಕೊಟ್ಟಿದೆ. ಇದರ ಜೊತೆಯಲ್ಲೆ ನಮ್ಮ ಜವಾಬ್ದಾರಿಯೂ ಹೆಚ್ಚಿದೆ. 2026-27ನೇ ಸಾಲಿನಲ್ಲೂ ನಿರೀಕ್ಷೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹಿಸಲು ಯೋಜನೆ ರೂಪಿಸುತ್ತೇವೆ. ಸಾರ್ವಜನಿಕರೂ ಉತ್ತಮ ಸ್ಪಂದನೆ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಪಿಡಿಒ ರಾಘವೇಂದ್ರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-15-398731263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.