ವಿಜಯಪುರ (ದೇವನಹಳ್ಳಿ): ಇಲ್ಲಿನ ಪುರಸಭೆ ಅಧಿಕಾರಿಗಳಿಗೆ ಸರ್ಕಾರಿ ಕಾರ್ಯಕ್ರಮಗಳಿಗೆ ಸದಸ್ಯರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ ಎಂದು ದೂರಿರುವ ಸದಸ್ಯರು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕಾರ್ಯಕ್ರಮದ ಹಿಂದಿನ ದಿನ ಯಾವುದೇ ಆಹ್ವಾನ ಪತ್ರಿಕೆಯಾಗಲಿ, ಮಾಹಿತಿಯಾಗಲಿ ನೀಡುತ್ತಿಲ್ಲ. ಸಮಾರಂಭ ಆರಂಭದ ಹತ್ತು ನಿಮಿಷ ಇರುವಾಗ ಪೋನ್ ಮೂಲಕ ಆಹ್ವಾನಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ತಪ್ಪಿಸಲು ಷಡ್ಯಂತ್ರ ನಡೆಸಲಾಗುತ್ತಿದೆ ಆರೋಪ ಮಾಡಿದ್ದಾರೆ.

‘ಕರೆದಂಗೆ ಇರಬೇಕು, ಕರೆದಿದ್ದಂಗೂ ಇರಬೇಕು’ ಎನ್ನುವ ಧೋರಣೆ ಪುರಸಭೆ ಅಧಿಕಾರಿಗಳಲ್ಲಿ ಇದ್ದಂತೆ ತೋರುತ್ತದೆ. ಪುರಸಭೆ ಕಾರ್ಯಕ್ರಮಗಳಿಗೆ ಆಹ್ವಾನಿಸಿದರೂ ಸಮಯ ಬದಲಾವಣೆ ಇರುತ್ತದೆ. ಇಲ್ಲವೇ ಸ್ಥಳವೇ ಬದಲಾಗಿರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ಪುರಸಭೆಯ ಕಾರ್ಯಾಲಯದಲ್ಲಿ ಆಯೋಜಿಸಿದ್ದ ‘ಸ್ವಚ್ಛತಾ ಹೇ ಸೇವಾ ಅಭಿಯಾನದ ಪೌರಕಾರ್ಮಿಕರ ಜಾಥಾಗೆ ಪುರಸಭೆಯ ಸದಸ್ಯರನ್ನು ಆಹ್ವಾನಿಸದ ಕಾರಣ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್ ಮತ್ತು ಆರೋಗ್ಯಾಧಿಕಾರಿ ಲಾವಣ್ಯ ಅವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.

ಪುರಸಭೆ ಅಧಿಕಾರಿಗಳು ಇತ್ತೀಚೆಗೆ ಕಾಟಾಚಾರಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾರ್ಯ ನಿರ್ವಹಿಸಲು ಮುಂದಾಗಿದ್ದಾರೆ ಎಂದು ಪುರಸಭೆ ಸದಸ್ಯ ನಂದಕುಮಾರ್ ಆರೋಪಿಸಿದರು.

ಕಾರ್ಯಕ್ರಮಗಳ ಸಂಬಂಧ ಜನಪ್ರತಿನಿಧಿಗಳಿಗೆ ತಪ್ಪು ಮಾಹಿತಿ ನೀಡುವುದು. ಪೋಟೋ, ವಿಡಿಯೊಗಾಗಿ ಅಧಿಕಾರಿಗಳು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಕಂಡು ಬಂದಿದೆ. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡುವುದಾದರೆ ಸರ್ಕಾರದ ಸಂಬಳ ಏಕೆ ಪಡೆಯಬೇಕು ಎಂದು ಅವರು ಪ್ರಶ್ನಿಸಿದರು.

ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಸಂಪರ್ಕ ಸೇತುವೆಯಾಗಿ ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಇಲ್ಲಿ ಅಧಿಕಾರಿಗಳ ಬೇಜಾಬ್ದಾರಿತನದಿಂದ ಜನಪ್ರತಿನಿಧಿಗಳ ಹಕ್ಕುಚ್ಯುತಿ ಆಗುತ್ತಿದೆ. ಇಂತಹ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಸದಸ್ಯ ಬೈರೇಗೌಡ ಆಗ್ರಹಿಸಿದರು.

ಕಾಟಾಚಾರಕ್ಕೆ ಅಧಿಕಾರಿಗಳ ಕಾರ್ಯ

ವಿಜಯಪುರ ಪಟ್ಟಣದಲ್ಲಿ ಸುಮಾರು 40 ಸಾವಿರ ಜನಸಂಖ್ಯೆ ಇದೆ. ನೂರಕ್ಕೂ ಹೆಚ್ಚು ಮಂದಿ ಪೌರಕಾರ್ಮಿಕರಿದ್ದಾರೆ. ಎಲ್ಲೆಂದರಲ್ಲಿ ಸಾರ್ವಜನಿಕರು ಕಸ ಸುರಿಯುತ್ತಿದ್ದಾರೆ. ಇದನ್ನು ತಡೆಯಲು ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಎಲ್ಲಿಯೂ ಬ್ಲಾಕ್ ಸ್ಪಾಟ್ಗಳ ಗುರುತಿಸಿಲ್ಲ. ಕಸ ವಿಂಗಡಣೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲ. ಈಗ ನವರಾತ್ರಿ ಶುರುವಾಗಿದೆ. ದೇವಾಲಯಗಳ ಮುಂದೆ ಕಸದ ರಾಶಿ ಬೀಳುತ್ತಿದೆ. ಸಮಯಕ್ಕೆ ಸರಿಯಾಗಿ ಕಸ ವಿಲೇವಾರಿ ಮಾಡುವಂತೆ ಅನೇಕ ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಕಾಟಾಚಾರಕ್ಕೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳು ಶಿಸ್ತು ಕ್ರಮ ಜರುಗಿಸಬೇಕು ಎಂದು ಹಲವು ಪುರಸಭೆ ಸದಸ್ಯರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.