ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ಮನೆಗಳಿಗೆ ನುಗ್ಗಿದ ಮಳೆ ನೀರು

ನೀರು ಹೊರಹಾಕಲು ಹೆಣಗಾಡಿದ ಜನ
Published : 14 ಆಗಸ್ಟ್ 2024, 15:17 IST
Last Updated : 14 ಆಗಸ್ಟ್ 2024, 15:17 IST
ಫಾಲೋ ಮಾಡಿ
Comments

ವಿಜಯಪುರ(ದೇವನಹಳ್ಳಿ): ಹೋಬಳಿಯ ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದುಗುರ್ಕಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಪರದಾಡುವಂತಾಯಿತು.

ಹೆದ್ದಾರಿ ಸಮೀಪದ ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ಮನೆಗಳಿಗೆ ನುಗ್ಗಿತು. ಇದರಿಂದ ರಾತ್ರಿ ನಿದ್ದೆಗೆಟ್ಟು ಮನೆಯಿಂದ ನೀರು ಹೊರ ಹಾಕಿದರು.

ರಾಷ್ಟ್ರೀಯ ಹೆದ್ದಾರಿಯನ್ನು ಎತ್ತರ ಸ್ಥಳದಲ್ಲಿ ನಿರ್ಮಾಣ ಮಾಡಿರುವುದರಿಂದ ತಗ್ಗಿನಲ್ಲಿರುವ ಜನವಸತಿ ಪ್ರದೇಶಕ್ಕೆ ನೀರು ನುಗ್ಗುತ್ತಿದೆ. ಮಳೆ ಬಂದಾಗಲೆಲ್ಲಾ ಇದೇ ಪರಿಸ್ಥಿತಿ ಉಂಟಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಸೂಚಿಸಬೇಕಾಗಿದೆ. ಚರಂಡಿಯ ಹೂಳು ತೆರವುಗೊಳಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಂ.ಮಾರಪ್ಪ ಒತ್ತಾಯಿಸಿದ್ದಾರೆ.

ಮಳೆ ಶುರುವಾದರೆ ಆತಂಕದಿಂದ ಜೀವನ ಮಾಡುವಂತಾಗಿದೆ. ಮಳೆ ಜೋರಾದರೆ ನೆಮ್ಮದಿಯಿಂದ ನಿದ್ದೆ ಮಾಡುವಂತಿಲ್ಲ. ಮನೆಗೆ ನುಗ್ಗಿದ ನೀರನ್ನು ಹೊರ ಹಾಕುತ್ತಾ ರಾತ್ರಿ ಕಳೆಯಬೇಕು. ಶೀಘ್ರವೇ ಈ ಸಮಸ್ಯೆಯಿಂದ ಮುಕ್ತಿ ನೀಡಬೇಕು ಎಂದು ಗ್ರಾಮಸ್ಥ ಮುನಿಯಪ್ಪ ಒತ್ತಾಯಿಸಿದರು.

ಮನೆಯಿಂದ ಮಳೆ ನೀರು ಹಾಕಿತ್ತಿರುವ ನಿವಾಸಿ
ಮನೆಯಿಂದ ಮಳೆ ನೀರು ಹಾಕಿತ್ತಿರುವ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT