ವಿಜಯಪುರ(ದೇವನಹಳ್ಳಿ): ಹೋಬಳಿಯ ಎ.ರಂಗನಾಥಪುರದಲ್ಲಿ ಒತ್ತುವರಿಯಾಗಿದ್ದ ಎಂಟು ಅಡಿ ರಾಜಕಾಲುವೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ಶುಕ್ರವಾರ ತೆರವುಗೊಳಿಸಿದರು.

ಅನೇಕ ವರ್ಷಗಳಿಂದ ಗ್ರಾಮದ ಸರ್ವೆ ನಂಬರ್ 23, 25 ಹಾಗೂ 35 ರಲ್ಲಿ ಹಾದುಹೋಗುವ ರಾಜಕಾಲುವೆ ಒತ್ತುವರಿಯಾಗಿತ್ತು. ಇದರಿಂದ ಸುಮಾರು 50ಕ್ಕೂ ಹೆಚ್ಚು ರೈತರು ತಮ್ಮ ಜಮೀನುಗಳಿಗೆ ಓಡಾಡಲು ಆಗುತ್ತಿರಲಿಲ್ಲ. ಗ್ರಾಮದ ಕೆರೆಗೆ ನೀರು ಸರಾಗವಾಗಿ ಹರಿಯಲು ಸಮಸ್ಯೆ ಉಂಟಾಗಿತ್ತು. ಈ ಕುರಿತು ಗ್ರಾಮಸ್ಥರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ತೆರವು ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಗ್ರಾಮದ ಕೆಲವರು ಜೆಸಿಬಿ ಯಂತ್ರಕ್ಕೆ ಅಡ್ಡಲಾಗಿ ನಿಂತು ತಡೆವೊಡ್ಡಿದರು. ಈ ಸಂದರ್ಭದಲ್ಲಿ ಕೆಲಕಾಲ ಅಧಿಕಾರಿಗಳು ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು. ಅಂತಿಮವಾಗಿ ಅಧಿಕಾರಿಗಳು ಸ್ಥಳೀಯರನ್ನು ಮನವೊಲಿಸಿ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾದರು.

ಭೂಮಾಪಕರ ವರದಿಯಂತೆ ಹಾಗೂ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಅವರ ಸೂಚನೆಯ ಮೇರೆಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಒತ್ತುವರಿದಾರರಿಗೆ ಮುಂಚಿತವಾಗಿ ನೋಟಿಸ್ ನೀಡಲಾಗಿತ್ತು. ಸ್ಥಳೀಯರಾದ ಚನ್ನಪ್ಪ ಎಂಬುವವರು ಜಾಗ ತೆರವುಗೊಳಿಸಲು 4 ದಿನಗಳ ಕಾಲಾವಕಾಶ ಕೇಳಿದ್ದು, ಆ ನಂತರ ಅಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದು ನಾಡ ಕಚೇರಿಯ ಉಪ ತಹಶೀಲ್ದಾರ್ ಡಿ.ಸುದೀಪ್ ತಿಳಿಸಿದರು.

ರಾಜಕಾಲುವೆ ಒತ್ತುವರಿಯಿಂದ ಸ್ಥಳೀಯ ರೈತರು ಜಮೀನಿಗೆ ತೆರಳಲು ತೊಂದರೆ ಪಡುವಂತಾಗಿತ್ತು. ಈಗ ಕಂದಾಯ ಅಧಿಕಾರಿಗಳು ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡಿದರಿಂದ ಇಲ್ಲಿನ ರೈತರಿಗೆ ಹೆಚ್ಚು ಅನುಕೂಲವಾಗಿದೆ. ಮಳೆ ನೀರು ರಾಜಕಾಲುವೆಯಿಂದ ಸರಾಗವಾಗಿ ಕೆರೆಗೆ ಸೇರಲಿದ್ದು, ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕೃಷ್ಣಮೂರ್ತಿ ಹೇಳಿದರು.

ಟೌನ್ ಆರ್.ಐ ಶ್ರೀನಿವಾಸ್, ಗ್ರಾಮ ಆಡಳಿತಾಧಿಕಾರಿ ಮೆಹಬೂಬ್ ಸಾಬ್, ರವಿಕುಮಾರ್, ಮಾಲಾ, ಮುನಿರಾಜು, ಜೀವನ್, ಗ್ರಾಮ ಸಹಾಯಕರಾದ ನರಸಿಂಹಮೂರ್ತಿ, ಶ್ರೀರಾಮು, ಚಲಪತಿ, ಸತೀಶ್, ಎನ್.ಕುಮಾರ್ ಗೌಡ, ರಾಮಚಂದ್ರ , ಸಿ.ನವೀನ್, ಚನ್ನಪ್ಪ, ಚಿಕ್ಕ ಚನ್ನಪ್ಪ, ಎನ್. ಮುರುಳಿದರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-15-85842345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.