ವಿಜಯಪುರ (ದೇವನಹಳ್ಳಿ): ಪಟ್ಟಣದಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುತ್ತಿದ್ದ ವಾಹನ ಸವಾರರಿಗೆ ಭಾನುವಾರ ವಿಜಯಪುರ ಟೌನ್ ಪೊಲೀಸರು ದಂಡದ ಬಿಸಿ ಮುಟ್ಟಿಸಿದರು.

ಪಟ್ಟಣದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿರುವುದರಿಂದ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವಾಹನ ಸವಾರರಿಗೆ ಪೊಲೀಸರು ದಂಡ ಹಾಕಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡದಂತೆ ಸವಾರರಿಗೆ ಎಚ್ಚರಿಕೆ ನೀಡಿದರು.

ಬಸ್ ನಿಲ್ದಾಣ, ಚನ್ನರಾಯಪಟ್ಟಣ ರಸ್ತೆ, ವೆಂಕಟರಮಣ ದೇವಾಲಯದ ರಸ್ತೆ, ಬಜಾರ್ ರಸ್ತೆ, ಹಳೆ ಆಸ್ಪತ್ರೆ ರಸ್ತೆ ಸೇರಿದಂತೆ ಹಲವೆಡೆ ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುತ್ತಿರುವುದರಿಂದ ಬೇರೆ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಪಡುವಂತಾಗಿತ್ತು.

ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯಾಚರಣೆ ನಡೆಸಿದ ಪೊಲೀಸರು ಪಟ್ಟಣದಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದ ಸವಾರರಿಗೆ ₹500 ರಿಂದ ₹1,000 ವರೆಗೆ ದಂಡ ವಿಧಿಸಿ ವಾಹನ ತೆರವುಗೊಳಿಸಿದರು.

ಪಟ್ಟಣದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ರಸ್ತೆ ಬದಿಗಳಲ್ಲಿ ಹಾಗೂ ಕಿರಿದಾದ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸುತ್ತಿರುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ಅಲ್ಲದೇ ಸಾರ್ವಜನಿಕರು ಓಡಾಟಕ್ಕೆ, ಬೇರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದ ಸವಾರರಿಗೆ ದಂಡ ವಿಧಿಸಲಾಗುತ್ತಿದೆ. ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಪಿಎಸ್ಐ ಸಾದಿಕ್ ಪಾಷಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.