ಭಾನುವಾರ, ಏಪ್ರಿಲ್ 11, 2021
32 °C

ವಿದ್ಯುತ್‌ ಕೇಂದ್ರಕ್ಕೆ ಗ್ರಾಮಸ್ಥರ ಬೀಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಕಳೆದ ಹತ್ತು ದಿನಗಳಿಂದಲೂ ವಿದ್ಯುತ್ ಪೂರೈಕೆಯಿಲ್ಲದೇ ವಣಕನಹಳ್ಳಿ ಗ್ರಾಮವು ಕಗ್ಗತ್ತಲಿನಲ್ಲೇ ಮುಳುಗಿದ್ದು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಕೂಡಲೇ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಆನೇಕಲ್‌ ತಾಲ್ಲೂಕಿನ ಕಮ್ಮಸಂದ್ರ ಅಗ್ರಹಾರದ ಸಮೀಪದ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಉಪ ವಿದ್ಯುತ್‌ ಕೇಂದ್ರಕ್ಕೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ವಣಕನಹಳ್ಳಿ ಗ್ರಾಮವು ತಾಲ್ಲೂಕಿನ ಗಡಿಗ್ರಾಮವಾಗಿದ್ದು ಕಳೆದ ವಾರ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕಚ್ಚಿದ್ದವು. ಇದನ್ನು ಸರಿಪಡಿಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಗ್ರಾಮವು ವಿದ್ಯುತ್ ಇಲ್ಲದೇ ಪರದಾಡುವಂತಾಗಿದೆ.

ದನ ಕರುಗಳಿಗೆ ನೀರು, ಗ್ರಾಮದಲ್ಲಿನ ಬೆಳೆಗಳಿಗೆ ನೀರು ಪೂರೈಕೆ ಮಾಡಲು ವಿದ್ಯುತ್‌ ಇಲ್ಲ. ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಗ್ರಾಮದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆನೇಕಲ್‌ ವಿದ್ಯುತ್ ಪ್ರಸರಣ ಘಟಕದ ಮುಂದೆ ಪ್ರತಿಭಟನೆ ನಡೆಸಿ ಕಚೇರಿಗೆ ಬೀಗ ಹಾಕಿದರು.

ಮುಖಂಡರಾದ ಬಾಬು, ರಮೇಶ್‌, ಶಶಿಧರ್‌ ರೆಡ್ಡಿ, ಧರ್ಮೇಂದ್ರ, ಸಂತೋಷ್, ಪ್ರವೀಣ್, ಸುಚೀಂದ್ರರೆಡ್ಡಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.