ಸೋಮವಾರ, ಆಗಸ್ಟ್ 15, 2022
22 °C

’ಡಾ.ವಿಷ್ಣುವರ್ಧನ್ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಕನ್ನಡ ನಾಡು –ನುಡಿ ಬಗೆಗೆ ಅಪಾರ ಕಳಕಳಿ ಹೊಂದಿದ್ದ ಡಾ.ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದ ಎಂದು ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವರದರಾಜು ಶ್ಲಾಘಿಸಿದರು.

ಪಟ್ಟಣದ ಮಂಗಳವಾರಪೇಟೆ ಬಸವೇಶ್ವರ ದೇವಾಲಯದ ಆವರಣದಲ್ಲಿ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಡಾ. ವಿಷ್ಣುವರ್ಧನ್ ಅವರ 70ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಯುವಜನರಲ್ಲಿ ಭಾಷಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವಂತಹ ಸದಭಿರುಚಿ ಚಿತ್ರಗಳಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದ ಅವರ ಜೀವನ ಕಿರಿಯ ನಟರಿಗೆ ಮಾದರಿ ಎಂದರು.

ಸಮಿತಿ ಕಾರ್ಯದರ್ಶಿ ರವೀಶ್ ಬಿರ್ಲಾ ಮಾತನಾಡಿ, ಅಭಿಮಾನಿಗಳ ಅಚ್ಚುಮೆಚ್ಚಿನ ನಟ ಡಾ.ವಿಷ್ಣುವರ್ಧನ್. ಆ ಮೇರು ನಟನ ಆದರ್ಶಮಯ ಜೀವನ ಮಾದರಿ. ಸದಾಕಾಲವೂ ಸ್ಥಿತ ಪ್ರಜ್ಞೆ ಹೊಂದಿದ್ದ ಅವರು, ಸಮಾಜವನ್ನು ಆರೋಗ್ಯಕರ ಚಿಂತನೆಗೆ ಹಚ್ಚುವಂತಹ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಕನ್ನಡದ ಬಗೆಗೆ ವಿಶೇಷ ಪ್ರೀತಿ ಹೊಂದಿದ್ದರು. ಕಳಂಕರಹಿತರಾಗಿ ಬಾಳಿದ ವಿಷ್ಣು ಅವರು ಯುವ ಸಮುದಾಯದ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಂಡಿದ್ದರು ಎಂದರು.

ವಿಷ್ಣುವರ್ಧನ್ ಹೆಸರಿನಲ್ಲಿ 50ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ರೇವಣ್ಣ, ಚಿತ್ರ ನಟ ಸುರೇಶ್, ಮುಖಂಡ ಮಂಗಳವಾರಪೇಟೆ ಶಂಕರ್, ವಿಷ್ಣು ಸೇನಾ ಸಮಿತಿ ಗೌರವಾಧ್ಯಕ್ಷ ಅಭಿನಂದನ್, ಪ್ರಧಾನ ಕಾರ್ಯದರ್ಶಿ ಶಿವರಾಜು, ಉಪಾಧ್ಯಕ್ಷ ಗುರುಪ್ರಸಾದ್, ಸಂಘಟನಾ ಕಾರ್ಯದರ್ಶಿ ವೆಂಕಟ ನಾರಾಯಣ, ಪದಾಧಿಕಾರಿಗಳಾದ ಕೃಷ್ಣ ಮತ್ತೀಕೆರೆ, ನಾಗರಾಜು, ಕೆ.ಮಂಜು, ಕೃಷ್ಣ, ಉಮೇಶ್, ಲೋಕೇಶ್, ಸೈಯದ್ ತಬ್ರೇಸ್, ಹರೀಶ್ ಗೌಡ, ದೇವನ್, ಪ್ರದೀಪ್, ಶಿವಕುಮಾರ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು