ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರದೃಷ್ಟಿ, ಮಾರ್ಗದರ್ಶನ ಯಶಸ್ಸಿನ ಸೋಪಾನ: ಎಸ್‌.ಆರ್‌. ಸಂತೋಷ್

Last Updated 27 ಜನವರಿ 2023, 5:11 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ವಿದ್ಯಾರ್ಥಿಗಳು ದೂರದೃಷ್ಟಿ, ಸತತ ಪ್ರಯತ್ನ, ಗುರುಗಳ ಮಾರ್ಗದರ್ಶನ, ಸಮಯಾವಕಾಶವನ್ನು ಸೂಕ್ತ ರೀತಿಯಲ್ಲಿ ಸದುಪಯೋಗ ಮಾಡಿಕೊಂಡರೆ ಯಶಸ್ಸು ದೊರೆಯಲಿದೆ’ ಎಂದು ದೊಡ್ಡಬಳ್ಳಾಪುರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೊ ವ್ಯವಸ್ಥಾಪಕ ಎಸ್‌.ಆರ್‌. ಸಂತೋಷ್ ಹೇಳಿದರು.

ನಗರ ಹೊರವಲಯದ ಜವಹಾರ್ ನವೋದಯ ವಿದ್ಯಾಲಯದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜವಾಹರ್‌ ನವೋದಯ ವಿದ್ಯಾಲಯಗಳು ದೇಶದಲ್ಲಿಯೇ ಅತ್ಯಂತ ಪ್ರತಿಷ್ಠಿತ ಶಾಲೆಗಳು ಎನ್ನುವ ಕೀರ್ತಿಗೆ ಪಾತ್ರವಾಗಿವೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಪ್ರತಿಭಾವಂತರಾಗುತ್ತಾರೆ ಎನ್ನುವುದನ್ನು ಇಂದಿಗೂ ಉಳಿಸಿಕೊಂಡು ಬಂದಿವೆ
ಎಂದರು.

ಪ್ರಾಂಶುಪಾಲ ಆರ್. ಚಕ್ರವರ್ತಿ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಸ್ತು ಪ್ರದರ್ಶನ, ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ದೇಶಭಕ್ತಿ ಗೀತೆ ಗಾಯನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT