ದೇವನಹಳ್ಳಿ: ಸ್ವಾಮಿ ವಿವೇಕಾನಂದರ ತತ್ವ ಮತ್ತು ಸಂದೇಶಗಳು ಕಾಲಾತೀತವಾಗಿದ್ದು, ಇಂದಿನ ಯುವಕರು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಗೀತಾ ಹೇಳಿದರು.

ಪಟ್ಟಣದ ಸೂಲಿಬೆಲೆ ರಸ್ತೆಯಲ್ಲಿರುವ ಗ್ರಾಮಾಂತರ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ವಾಮಿ ವಿವೇಕಾನಂದ ಜಯಂತಿಯಲ್ಲಿ ಮಾತನಾಡಿದರು.

ವಿವೇಕಾನಂದರ ಆದರ್ಶಗಳನ್ನು ಅರ್ಥಮಾಡಿಕೊಂಡು ಜ್ಞಾನಾರ್ಜನೆ ಮತ್ತು ಸಹನೆಯೊಂದಿಗೆ ಕೆಲಸ ಮಾಡಿದರೆ ಯುವಕರು ತಮ್ಮ ಗುರಿ ತಲುಪಲು ಸಾಧ್ಯವಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ಪಾಲಿಸುವ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು. ಭಾರತೀಯ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸಿದ ಮಹಾನ್ ಚಿಂತಕರಾದ ವಿವೇಕಾನಂದರು ಇಂದಿನ ಯುವಪೀಳಿಗೆಗೆ ದಾರಿದೀಪವಾಗಿದ್ದಾರೆ. ಅವರ ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತ ವಿಶಾಲ ದೃಷ್ಟಿಕೋನವು ದೇಶದ ಪ್ರಗತಿಗೆ ಮಾರ್ಗದರ್ಶಕವಾಗಿದೆ ಎಂದರು.

ನಿವೃತ್ತ ಶಿಕ್ಷಕ ಶರಣಯ್ಯ ಹಿರೇಮಠ ಮಾತನಾಡಿ, ಮಕ್ಕಳಲ್ಲಿ ರಾಷ್ಟ್ರಭಕ್ತಿ ಮತ್ತು ದೇಶಪ್ರೇಮದ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದರು.

ಶತಮಾನಗಳಾದರೂ ಸ್ವಾಮಿ ವಿವೇಕಾನಂದರು ಜನಮನದಲ್ಲಿ ಜೀವಂತವಾಗಿದ್ದಾರೆ. ಅವರ ಜನ್ಮದಿನವನ್ನು ಆಚರಿಸುವ ಮೂಲಕ ಮಕ್ಕಳಿಗೆ ಅವರ ಸಾಧನೆ, ತತ್ವ ಮತ್ತು ಆದರ್ಶಗಳ ಪರಿಚಯವಾಗುತ್ತದೆ ಎಂದು ಹೇಳಿದರು.

ಸ್ವಾಮಿ ವಿವೇಕಾನಂದರು ಸ್ವಾಭಿಮಾನಿ ಮತ್ತು ಸ್ವಾವಲಂಬಿ ಭಾರತದ ಕನಸು ಕಂಡ ಮಹಾಪುರುಷರಾಗಿದ್ದು, ಶಿಕ್ಷಣ, ಧರ್ಮ ಮತ್ತು ತತ್ವಜ್ಞಾನಗಳನ್ನು ರಾಷ್ಟ್ರದ ಆಧಾರಸ್ತಂಭಗಳೆಂದು ಪ್ರತಿಪಾದಿಸಿದ್ದರು. ಅಮೆರಿಕಾದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ನೀಡಿದ ಅವರ ಐತಿಹಾಸಿಕ ಭಾಷಣ ಜಗತ್ತಿನ ಗಮನ ಸೆಳೆದಿತ್ತು. ಶಿಕ್ಷಣದಿಂದ ಮಾನಸಿಕ ಮತ್ತು ದೈಹಿಕ ಬಲವರ್ಧನೆ ಸಾಧ್ಯವಾಗುತ್ತದೆ, ಧರ್ಮ ಮನುಷ್ಯನನ್ನು ಒಳಿತಿನ ದಾರಿಗೆ ನಡೆಸುತ್ತದೆ ಎಂಬ ಸಂದೇಶವನ್ನು ಅವರು ಸಾರಿದ್ದರು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.