ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

22 ಸಾವಿರ ಮತದಾರರ ಹೆಸರು ಮಾಯ

Last Updated 2 ಡಿಸೆಂಬರ್ 2022, 4:09 IST
ಅಕ್ಷರ ಗಾತ್ರ

ಆನೇಕಲ್‌: ಆನೇಕಲ್‌ ವಿಧಾನಸಭಾ ಕ್ಷೇತ್ರದಲ್ಲಿ 22 ಸಾವಿರ ಮಂದಿ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಬಗ್ಗೆ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಮತದಾರರ ಪಟ್ಟಿಯಿಂದ ತೆಗೆಯುವಿಕೆ ಮತ್ತು ಸೇರ್ಪಡೆಯ ಪ್ರಕ್ರಿಯೆಯು ಪಾರದರ್ಶಕವಾಗಿರಬೇಕು ಎಂದು ಸೂಚಿಸಲಾಗಿದೆ ಎಂದು ಕ್ಷೇತ್ರದ ಶಾಸಕ ಬಿ.ಶಿವಣ್ಣ ಹೇಳಿದರು.

ತಾಲ್ಲೂಕಿನ ಬಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇಹಳ್ಳಿಯಲ್ಲಿ ಮಾತನಾಡಿದ ಅವರು, ‘ಉದ್ದೇಶ ಪೂರ್ವಕವಾಗಿ ಮತದಾರರಪಟ್ಟಿಯಲ್ಲಿ ಹೆಸರುಗಳನ್ನು ತೆಗೆದಿದ್ದರೆ ಉಗ್ರ ಹೋರಾಟವನ್ನು ಮಾಡಲಾಗುವುದು’ ಎಂದು ಎಚ್ಚರಿಸಿದರು.

‘ಪ್ರಜಾಪ್ರಭುತ್ವವದಲ್ಲಿ ಮತದಾನ ಹಕ್ಕು ಸರ್ವ ಶ್ರೇಷ್ಠವಾದ ಹಕ್ಕು ಅಂತಹ ಮತದಾನದ ಹಕ್ಕುನ್ನು ಕಿತ್ತುಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಬಿಎಲ್‌ಓಗಳು, ರಾಜಸ್ವ ನಿರೀಕ್ಷಕರು ಮತ್ತು ಚುನಾವಣಾ ತಂಡ ಪ್ರತಿ ಮನೆಗಳಿಗೂ ಭೇಟಿ ನೀಡಿ ಮತದಾರರ ಬಗ್ಗೆ ಮಾಹಿತಿ ಪಡೆದು ಮತದಾರರ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕು. ಆದರೆ ಆನೇಕಲ್‌ ವಿಧಾನಸಭಾ ಕ್ಷೇತ್ರದಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆಯ ವ್ಯಕ್ತಿಗಳನ್ನು ಆನೇಕಲ್‌ ಮತದಾರ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಬಗ್ಗೆ ತಹಶೀಲ್ದಾರ್‌ ಅವರಿಗೆ ತಿಳಿಸಲಾಗಿದೆ. ಶೀಘ್ರ ಕ್ರಮಕೈಗೊಂಡು ಅರ್ಹರನ್ನು ಮಾತ್ರ ಮತದಾರ ಪಟ್ಟಿಗೆ ಸೇರಿಸಬೇಕು’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT