ದೇವನಹಳ್ಳಿ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಬೂತ್ ಮಟ್ಟದ ಏಜೆಂಟ್ಗಳು ಸಂಪೂರ್ಣ ಸಹಕಾರ ನೀಡಬೇಕು. ಅಕ್ರಮ ಮತದಾನ ತಡೆಯುವ ಮೂಲಕ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪಾರದರ್ಶಕ ಮತದಾನಕ್ಕೆ ಎಚ್ಚರ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಿಜೆಪಿಯ ಬೂತ್ ಲೆವೆಲ್ ಏಜೆಂಟ್–2 (ಬಿಎಲ್ಎ–2) ಕಾರ್ಯಗಾರದಲ್ಲಿ ಶನಿವಾರ ಅವರು ಮಾತನಾಡಿದರು.

ಬೂತ್ ಮಟ್ಟದ ಏಜೆಂಟ್ಗಳು ಪಕ್ಷದ ಆಧಾರಸ್ತಂಭಗಳಾಗಿದ್ದು, ಮತಗಟ್ಟೆಗಳಲ್ಲಿ ಕಳ್ಳ ಮತದಾನ, ಬೇರೆ ಊರಿನವರು ಬಂದು ಮತ ಚಲಾಯಿಸುವಂತಹ ಅಕ್ರಮ ತಡೆಯಬೇಕು ಎಂದು ಹೇಳಿದರು.

ಮತದಾರರನ್ನು ಮುಂಚಿತವಾಗಿಯೇ ಮತಗಟ್ಟೆಗೆ ಕರೆತರುವುದು ಏಜೆಂಟ್ಗಳ ಪ್ರಮುಖ ಜವಾಬ್ದಾರಿಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ದೀರ್ಘಕಾಲದಿಂದ ಕ್ಷೇತ್ರದ ಹೊರಗೆ ವಾಸವಾಗಿರುವವರು ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವಂತೆ ಚುನಾವಣಾಧಿಕಾರಿಗಳಿಗೆ ಮನವಿ ಮಾಡಬೇಕಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ದೇವನಹಳ್ಳಿ ಮತ್ತು ವಿಜಯಪುರ ಪುರಸಭೆ ಚುನಾವಣೆಗಳ ಸಿದ್ಧತೆ ಕುರಿತಾಗಿಯೂ ಚರ್ಚೆ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ವಿರುದ್ಧ ಜನರಲ್ಲಿ ಅಸಮಾಧಾನವಿದ್ದು, ಇಂತಹ ಸಂದರ್ಭದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳ ಲಾಭವನ್ನು ಜನರಿಗೆ ಮನದಟ್ಟು ಮಾಡಿಕೊಡುವುದರೊಂದಿಗೆ ಸ್ಥಳೀಯ ಸಮಸ್ಯೆಗಳನ್ನು ಹಿರಿಯ ನಾಯಕರ ಗಮನಕ್ಕೆ ತಂದು ಪರಿಹರಿಸಬೇಕು ಎಂದು ಕರೆ ನೀಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಂಡಲ ಅಧ್ಯಕ್ಷ ಅಂಬರೀಶ್ ಗೌಡ ಉಪಸ್ಥಿತರಿದ್ದರು.

ಭ್ರಷ್ಟಾಚಾರ ಅಂತ್ಯಕ್ಕೆ ‘ವಿಬಿ ಜಿ ರಾಮ್ಜಿ’

ದೇವನಹಳ್ಳಿ: ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್ ನಾಯಕರು ಕೇವಲ ಹೆಸರು ಬದಲಾವಣೆ ವಿಷಯವನ್ನು ಮುಂದಿಟ್ಟು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಆರೋಪಿಸಿದರು. ಯುಪಿಎ ಆಡಳಿತದ ಅವಧಿಯಲ್ಲಿ ಮನರೇಗಾ ಯೋಜನೆಯಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ವ್ಯಾಪಕವಾಗಿತ್ತು. ಹಾಜರಾತಿ ದಾಖಲೆಯಲ್ಲಿ ಅಕ್ರಮಗಳು ನಡೆಯುತ್ತಿದ್ದವು. ಯೋಜನೆಯ ಅನುದಾನದಲ್ಲಿ ಶೇ.40 ರಿಂದ 50 ರಷ್ಟು ದುರುಪಯೋಗವಾಗಿತ್ತು ಎಂದು ಸಿಎಜಿ ವರದಿಯೂ ಹೇಳಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎನ್ಡಿಎ ಸರ್ಕಾರ ಯೋಜನೆಯನ್ನು ಸುಧಾರಿಸಿ ಜಿಯೋ ಟ್ಯಾಗಿಂಗ್ ಸ್ಯಾಟಲೈಟ್ ಚಿತ್ರ ಗತಿಶಕ್ತಿ ಸಂಪರ್ಕ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಮೂಲಕ ಪಾರದರ್ಶಕತೆ ತಂದಿದೆ ಎಂದು ಹೇಳಿದರು. ಯುಪಿಎ ಅವಧಿಯಲ್ಲಿ ಯೋಜನೆಗೆ ₹2.13 ಲಕ್ಷ ಕೋಟಿ ಖರ್ಚಾಗಿದ್ದರೆ ಎನ್ಡಿಎ ಸರ್ಕಾರದ ಅವಧಿಯಲ್ಲಿ ₹8.53 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಮಾನವ ದಿನಗಳ ಸೃಷ್ಟಿ ಕಾಮಗಾರಿಗಳ ಸಂಖ್ಯೆ ಹಾಗೂ ಆಸ್ತಿ ನಿರ್ಮಾಣದಲ್ಲಿ ಗಣನೀಯ ಹೆಚ್ಚಳವಾಗಿದೆ ಎಂದು ತಿಳಿಸಿದರು. ಗ್ರಾಮೀಣ ಅಭಿವೃದ್ಧಿ ಹಾಗೂ ಸಾರ್ವಜನಿಕ ಹಣದ ದುರುಪಯೋಗ ತಡೆಯುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.