ಸೂಲಿಬೆಲೆ: ಮತದಾನ ಜಾಗೃತಿ ಜಾಥಾ

ಸೂಲಿಬೆಲೆ: ‘ಹೊಸಕೋಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಇದೇ 22ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲ ಮತಗಟ್ಟೆಗಳಿಗೆ ನೀರು, ಶೌಚಾಲಯ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಪೂರ್ಣಗೊಂಡಿದೆ. ಮತದಾರರಿಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ಸದಾಚಾರ ಸಂಹಿತೆ ನೀತಿ ಸಮಿತಿಯ ಮುಖ್ಯಸ್ಥ ಸಿ.ಎಸ್. ಶ್ರೀನಾಥ್ ಗೌಡ ತಿಳಿಸಿದರು.
ಸೂಲಿಬೆಲೆ ಪಟ್ಟಣದಲ್ಲಿ ಬುಧವಾರ ಮತದಾನ ಜಾಗೃತಿ ಅಂಗವಾಗಿ ಬೈಕ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಮತದಾರರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯಿತಿಯಿಂದ ಬಡ ಕುಟುಂಬದವರಿಗೆ ಮತದಾನದ ಹಿಂದಿನ ದಿನ ಉಚಿತವಾಗಿ ಮಾಸ್ಕ್ ವಿತರಿಸಬೇಕು. ಶೇಕಡ 100ರಷ್ಟು ಮತದಾನ ನಡೆಯುವಂತೆ ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.
ಸೂಲಿಬೆಲೆ ಗ್ರಾಮ ಪಂಚಾಯಿತಿ ಪಿಡಿಒ ಚೈತ್ರಾ, ಮುನಿಗಂಗಯ್ಯ ಹಾಗೂ ಹೋಬಳಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ
ಪಾಲ್ಗೊಂಡಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.