ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮತದಾನ ಪವಿತ್ರ ಹಕ್ಕು’

Last Updated 21 ಮಾರ್ಚ್ 2019, 13:47 IST
ಅಕ್ಷರ ಗಾತ್ರ

ವಿಜಯಪುರ: ‘ಮತದಾನ ಮಾಡುವುದು ಸಂವಿಧಾನ ನಮಗೆ ನೀಡಿರುವ ಪರಮ ಪವಿತ್ರ ಹಕ್ಕು’ ಎಂದು ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಹೇಳಿದರು.

ಚುನಾವಣಾ ಆಯೋಗದ ಸ್ವೀಪ್ ಸಮಿತಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವತಿಯಿಂದ ಇಲ್ಲಿನ ಗಾಂಧಿ ಚೌಕದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಮತದಾನ ಮಾಡುವ ಮೂಲಕ ಜನರು ಪ್ರಜಾಪ್ರಭುತ್ವ ಉಳಿವಿಗೆ ಮುಂದಾಗಬೇಕು. ಪ್ರಪಂಚದಲ್ಲೇ ಉತ್ತಮ ಮತ್ತು ದೊಡ್ಡದಾದ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ. ಮತದಾನ ಪ್ರಕ್ರಿಯೆಯಿಂದ ಸಾಮಾನ್ಯವಾಗಿ ಯುವಜನರು ದೂರ ಉಳಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಸಂಚಾಲಕ ಬಿ.ಕೆ.ಶಿವಪ್ಪ ಮಾತನಾಡಿ, ‘ನಾವು ನೀಡುವ ಒಂದೊಂದು ಮತ ಈ ದೇಶದ ಸಾರ್ವಭೌಮತೆ ಎತ್ತಿಹಿಡಿಯಲು ಸಹಾಯಕವಾಗುತ್ತದೆ. ಜನರು ಕಡ್ಡಾಯವಾಗಿ ಮತದಾನ ಮಾಡುವುದರ ಜತೆಗೆ ಇತರರಿಂದಲೂ ಮತದಾನ ಮಾಡಿಸುವ ಕೆಲಸ ಮಾಡಬೇಕಾಗಿದೆ. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದಂತೆ ನೋಡಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT