ಕಠಿಣ ಕ್ರಮ: ರೌಡಿ ಶೀಟರ್‌ಗಳಿಗೆ ಎಚ್ಚರಿಕೆ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆಯು ಡಿ. 27ರಂದು ನಡೆಯುವ ಹಿನ್ನೆಲೆಯಲ್ಲಿ ಬುಧವಾರ ಡಿವೈಎಸ್‌ಪಿ ಟಿ. ರಂಗಪ್ಪ ಅವರು ರೌಡಿಶೀಟರ್‌ಗಳ ಪರೇಡ್ ನಡೆಸುವ ಮೂಲಕ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ನಗರ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ರೌಡಿಶೀಟರ್‌ಗಳ ಪರೇಡ್‌ನಲ್ಲಿ ಅವರು ಮಾತನಾಡಿದರು.
26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಯಾವುದೇ ಗಲಭೆ ಅಥವಾ ಅಕ್ರಮಗಳಲ್ಲಿ ಭಾಗಿಯಾದರೆ ಕಠಿಣ
ಕ್ರಮ ಕೈಗೊಳ್ಳಲಾಗುವುದು. ಪಂಚಾಯಿತಿ ಚುನಾವಣೆಗೂ ನೊದಲು ಎಲ್ಲಾ ರೌಡಿಶೀಟರ್‌ಗಳ ಮೇಲೆ ನಿಗಾವಹಿಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗುವುದು. ತಾಲ್ಲೂಕಿನಲ್ಲಿ ಶಾಂತಿಯುತ ಮತದಾನಕ್ಕಾಗಿ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಚುನಾವಣೆಯಲ್ಲಿ ಭಾಗವಹಿಸಬೇಕು ಎಂದರು.
ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಬಿ. ನವೀನ್‌ಕುಮಾರ್, ಸಬ್‌ಇನ್‌ಸ್ಪೆಕ್ಟರ್ ಸೋಮಶೇಖರ್, ಮಂಜುನಾಥ್, ಬೇಬಿವಾಲೆಕಾರ್, ಗಜೇಂದ್ರ ಇದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.