ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಮಾಡಿ ಉತ್ತಮ ಪ್ರತಿನಿಧಿ ಆರಿಸಿ

ಚಿಕ್ಕ ಅಳುವಾರ: ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ.ಎ.ಎಂ.ಖಾನ್ ಸಲ
Last Updated 6 ಏಪ್ರಿಲ್ 2018, 9:47 IST
ಅಕ್ಷರ ಗಾತ್ರ

ಕುಶಾಲನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆ ಯಲ್ಲಿ ಮತಚಲಾವಣೆ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬ ಮತದಾರರ ಆದ್ಯಕರ್ತವ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ಎ.ಎಂ.ಖಾನ್ ಹೇಳಿದರು.ಸಮೀಪದ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರ ಹಾಗೂ ಮಂಗಳ ಅಲ್ಯುಮಿನಿ ಅಸೋಸಿಯೇಷನ್ ಸಹಯೋಗದೊಂದಿಗೆ ನಡೆದ ಮತದಾನದ ಮಹತ್ವ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸದೃಢ ಪ್ರಜಾಪ್ರಭುತ್ವದ ನಿರ್ಮಾಣ ದಲ್ಲಿ ಸಮರ್ಥ ಜನಪ್ರತಿನಿಧಿಯನ್ನು ಅತ್ಯಂತ ಜಾಗೃತಿಯಿಂದ ಆಯ್ಕೆ ಮಾಡಬೇಕು. ಸಂವಿಧಾನ ಬದ್ಧವಾಗಿ ದೊರೆತ ಮತದಾನದ ಹಕ್ಕನ್ನು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ  ಚಲಾವಣೆ ಮಾಡಬೇಕು ಎಂದರು.

ಧರ್ಮ ಅಥವಾ ಜಾತಿ ಆಧಾರದ ಮೇಲೆ ಜನಪ್ರತಿನಿಧಿಯನ್ನು ಆಯ್ಕೆ ಮಾಡುವುದಕ್ಕಿಂತ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಆಡಳಿತ ನೀಡುವಂತಹ ಸಮರ್ಥ ಆಡಳಿತಗಾರನ ಆಯ್ಕೆ ಮಾಡು ವುದು ಸೂಕ್ತ ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಅಲ್ಯುಮಿನಿ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವಜನತೆ ಸೇರಿದಂತೆ ದೇಶದ ಎಲ್ಲರೂ ಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗೆ ಮತ ಚಲಾವಣೆ ಬಹುಮುಖ್ಯ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭ ಮಂಗಳ ಅಲ್ಯುಮಿನಿ ಅಸೋಸಿಯೇಷನ್ ಸಂಚಾಲಕ ಮಧುಸೂಧನ ಭಟ್, ಉಪಾಧ್ಯಕ್ಷ ಸದಾನಂದಶೆಟ್ಟಿ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಪಿ.ಎಲ್.ಧರ್ಮ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿ ನಿರಂಜನ್ ಪ್ರಾರ್ಥಿಸಿದರು. ಪ್ರಾಧ್ಯಾಪಕ ಡಾ.ಮಹಾಂತೇಶ ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT