ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಏನು ಅನ್ಯಾಯ ಮಾಡಿದ್ದಾರೆ ?: ನಿಖಿಲ್ ಕುಮಾರಸ್ವಾಮಿ

Last Updated 10 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ದೇವನಹಳ್ಳಿ: ‘ನಮ್ಮ ತಂದೆ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಆಡಳಿತಾವಧಿಯಲ್ಲಿ ರಾಜ್ಯದ ಜನರಿಗೆ ಏನು ಅನ್ಯಾಯ ಮಾಡಿದ್ದಾರೆ’ ಎಂದು ಜೆಡಿಎಸ್ ಯುವ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.

ಇಲ್ಲಿನ ಕಾರಹಳ್ಳಿ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಉಪಚುನಾವಣೆ ಫಲಿತಾಂಶ ಅಚ್ಚರಿ ಮೂಡಿಸಿದೆ‌. ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲಮನ್ನಾದ ಜತೆಗೆ ಅಭಿವೃದ್ಧಿಗೆ ಒತ್ತು ನೀಡಿದ್ದರು. ಕೆ.ಆರ್ ಪೇಟೆ ಕ್ಷೇತ್ರದಲ್ಲಿ 22ಸಾವಿರ ರೈತರ ಸಾಲಮನ್ನಾ ಆಗಿದೆ. ದುಡ್ಡಿನಿಂದ ಮತದಾರರನ್ನು ಖರೀದಿಸಲು ನಮ್ಮ ಪಕ್ಷದಲ್ಲಿ ಹಣವಿಲ್ಲ. ರಾಜಕೀಯ ನಿಂತ ನೀರಲ್ಲ. ಭವಿಷ್ಯದಲ್ಲಿ ಬೇಕಾದಷ್ಟು ಕಾಲಾವಕಾಶವಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ’ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳಿಸಿದೆ. ಅನರ್ಹ ಶಾಸಕರನ್ನು ಅನರ್ಹರನ್ನಾಗಿಯೇ ಮಾಡುತ್ತೇವೆ ಎಂದು ಆಯಾ ಕ್ಷೇತ್ರದ ಮತದಾರರು ಹೇಳಿದ್ದರು. ಅನರ್ಹರನ್ನೇ ಗೆಲ್ಲಿಸಿ ಮತದಾರರು ಸೋತಿದ್ದಾರೆ. ಅದರೂ, ಮತದಾರರ ತೀರ್ಪಿಗೆ ತಲೆಬಾಗುತ್ತೇನೆ ಎಂದರು.

ಜೆಡಿಎಸ್ ಅನೇಕ ಬಾರಿ ಏಳುಬೀಳು ಕಂಡಿದೆ. ಮುಂಬೈನಲ್ಲಿ ನಡೆದ ಹೈಡ್ರಾಮವನ್ನು ಎಲ್ಲರೂ ನೋಡಿದ್ದಾರೆ. ನೆರೆ ಹಾವಳಿಯಲ್ಲಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿದ್ದ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಗೆ ರಾಜಕೀಯ ಹುಚ್ಚಾಟದಲ್ಲಿ ಮುಳಗಿದ್ದರು ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT