ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೊಡ್ಡಬಳ್ಳಾಪುರ: ಚಾಕುವಿನಿಂದ ಇರಿದು ಹೆಂಡತಿ ಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೃತ್ಯ
Last Updated 13 ಏಪ್ರಿಲ್ 2023, 6:15 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀನಗರದ ಖಾಸಗಿ ಶಾಲೆ ಸಮೀಪದ ಮನೆಯೊಂದರಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ನವ ವಿವಾಹಿತೆಯನ್ನು ಆಕೆಯ ಪತಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಮೃತರನ್ನು ತಮಿಳುನಾಡಿನ ಕನ್ಯಾಕುಮಾರಿ ಮೂಲದ ಜನಿಲಾ ಜೋಬಿಯಾ(22) ಎಂದು ಗುರುತಿಸಲಾಗಿದೆ.

ಈ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ನಗರ ಠಾಣೆ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಏಳು ತಿಂಗಳ ಹಿಂದೆಯಷ್ಟೇ ಶ್ರೀನಗರದ ಸ್ಯಾಮ್ ಎಂಬಾತನೊಂದಿಗೆ ಮದುವೆಯಾಗಿತ್ತು. ಮಂಗಳವಾರ ರಾತ್ರಿ ಸ್ಯಾಮ್ ಮತ್ತು ಪತ್ನಿ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಕೋಪದಲ್ಲಿ ಸ್ಯಾಮ್, ತನ್ನ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅಡ್ಡಬಂದ ತನ್ನ ತಂದೆ ಮತ್ತು ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾನೆ. ಆದರೆ, ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸ್ವತಃ ತಾನೇ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಜನಿಲಾ ಜೋಬಿಯಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಘಟನಾ ಸ್ಥಳಕ್ಕೆ ಬುಧವಾರ ಬೆಳಿಗ್ಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿವೈಎಸ್‌ಪಿ ನಾಗರಾಜ್, ಇನ್‌ಸ್ಪೆಕ್ಟರ್ ಪ್ರೀತಂ ಶ್ರೇಯಕರ, ಹರೀಶ್ ಕುಮಾರ್ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT