ಆನೇಕಲ್: ಕಲ್ಲುಬಾಳು ಗ್ರಾಮದ ವ್ಯಕ್ತಿಯೊಬ್ಬರು ‘ಪಾಕಿಸ್ತಾನ ಜಿಂದಾಬಾದ್’ ಎಂದು ವೈ–ಫೈ ಯೂಸರ್ ನೇಮ್ ಇಟ್ಟುಕೊಂಡಿರುವ ಬಗ್ಗೆ ದೂರು ದಾಖಲಾದ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಭಜರಂಗದಳದ ಕಾರ್ಯಕರ್ತರು, ಇದು ದೇಶದ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶ ಎಂದು ಆರೋಪಿಸಿದ್ದಾರೆ.

ಮೊಬೈಲ್ ವೈ–ಫೈ ಆನ್ ಮಾಡಿದರೆ ಪಾಕಿಸ್ತಾನ ಜಿಂದಾಬಾದ್ ಎಂದು ಧ್ವನಿ ಬರುತ್ತದೆ ಎಂದು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಜಿಗಣಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಗ್ರಾಮದ ಸಹಕಾರಿ ಬ್ಯಾಂಕ್, ಶಾಲೆ ಸೇರಿದಂತೆ ಗ್ರಾಮದ ವಿವಿಧೆಡೆ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.