ಬುಧವಾರ, ಫೆಬ್ರವರಿ 19, 2020
30 °C

ಜೂನ್‌ನಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆ: ಎಂಟಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ‘ಮುಂಬರುವ ಜೂನ್ ತಿಂಗಳಿನಲ್ಲಿ ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ’ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಅವರು ನಗರದ ಅವಿಮುಕ್ತೇಶ್ವರ ದೇವಾಲಯದಲ್ಲಿ ಸೋಮವಾರ ನಗರಸಭೆ ಚುನಾವಣೆ ಪ್ರಚಾರ ಪ್ರಾರಂಭಿಸಿ ಮಾತನಾಡಿದರು. ‘ಜೂನ್ ತಿಂಗಳಿನಲ್ಲಿ ವಿಧಾನ ಪರಿಷತ್‌ನ 7 ಸ್ಥಾನಗಳು ತೆರವಾಗಲಿವೆ. ಆಗ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಾಗ್ದಾನವನ್ನು ಯಡಿಯೂರಪ್ಪ ನೀಡಿದ್ದಾರೆ’ ಎಂದರು. 

‘ಯಡಿಯೂರಪ್ಪ ಕೊಟ್ಟ ಮಾತಿಗೆ ಎಂದೂ ತಪ್ಪಿಲ್ಲ. ಅವರ ಮೇಲೆ ನಂಬಿಕೆ ಇದೆ. ಈಗಾಗಲೇ ನಗರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು ಮಾಡಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದು ಅಧಿಕಾರಕ್ಕೆ ಏರಿದರೆ ಕಾವೇರಿ ನಾಲ್ಕನೇ ಹಂತದಿಂದ ನೀರು ತರುತ್ತೇವೆ’ ಎಂದು ಭರವಸೆ ನೀಡಿದರು. 

‌ನಗರ ಬಿಜೆಪಿ ಘಟಕದ ಅಧ್ಯಕ್ಷ ಜಯರಾಜ್ ಹಾಗೂ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು