ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಘಟಿತ ಪ್ರಯತ್ನದಿಂದ ಗೆಲುವು ಸಾಧ್ಯ’

ವೀರಪ್ಪ ಮೊಯಿಲಿ ಗೆಲುವಿಗೆ ಜೆಡಿಎಸ್ ಬೆಂಬಲವೂ ಅಗತ್ಯ: ಹರ್ಷ
Last Updated 22 ಮಾರ್ಚ್ 2019, 13:57 IST
ಅಕ್ಷರ ಗಾತ್ರ

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಾಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿ ಎಂ.ವೀರಪ್ಪ ಮೊಯಿಲಿ ಗೆಲುವಿಗೆ ಜೆಡಿಎಸ್ ಬೆಂಬಲ ಅತಿಮುಖ್ಯವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಹರ್ಷ ಮೊಯಿಲಿ ತಿಳಿಸಿದರು.

ಇಲ್ಲಿನ ಕನ್ನಮಂಗಲ ಶ್ರೀಕೃಷ್ಣಗಾರ್ಡನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಎರಡು ಬಾರಿ ಇದೇ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿ ಆನೇಕ ಜನಪರ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕಾಂಗ್ರೆಸ್, ಎರಡು ಜೆಡಿಎಸ್, ಒಂದು ಬಿಜೆಪಿ ವಶದಲ್ಲಿದೆ. ಬಿಜೆಪಿ ವಶದಲ್ಲಿರುವ ಯಲಹಂಕ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮತ್ತು ಜೆಡಿಎಸ್‌ನ ನಿಷ್ಠಾವಂತ ಕಾರ್ಯಕರ್ತರಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಸಂಘಟಿತ ಪ್ರಯತ್ನವಾದರೆ ಮಾತ್ರ ಗೆಲುವು ಸುಲಭವಾಗಲಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ಮಾಜಿ ಶಾಸಕ ವೆಂಕಟಸ್ವಾಮಿ ಮತ್ತು ಕೆ.ಪಿ.ಸಿ.ಸಿ ಸದಸ್ಯ ಚಿನ್ನಪ್ಪ ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕು ಎಂಬ ಏಕೈಕ ದೃಷ್ಟಿಯಿಂದ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಆಡಳಿತ ನಡೆಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಿನಾರಾಯಣ್ ಮತ್ತು ಕೆ.ಪಿ.ಸಿ.ಸಿ ಸದಸ್ಯ ಚೇತನ್‌ಗೌಡ ಮಾತನಾಡಿ, ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿರುವ ಕ್ಷೇತ್ರವನ್ನು ಜೆಡಿಎಸ್ ಬೆಂಬಲಿಸಬೇಕು. ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕ್ಷೇತ್ರವನ್ನು ಕಾಂಗ್ರೆಸ್ ಬೆಂಬಲಿಸಬೇಕು. ಸ್ವಲ್ಪ ಎಡವಿದರೂ ಸಮ್ಮಿಶ್ರ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಎರಡು ಪಕ್ಷಗಳ ಮುಖಂಡರು ಅರ್ಥ ಮಾಡಿಕೊಂಡು ಚುನಾವಣಾ ಪ್ರಚಾರ ನಡೆಸಬೇಕಾಗಿದೆ ಎಂದು ಹೇಳಿದರು.

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗ ಘಟಕದ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಘಟಕದ ಅಧ್ಯಕ್ಷ ಅಪ್ಪಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ ಮಂಜುನಾಥ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಾರುತಿ, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಾಗೇಶ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಡಿ.ವಿ ಕೃಷ್ಣಮೂರ್ತಿ, ಕುಂದಾಣ ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಬೀಸೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಖಾದಿ ಬೊರ್ಡ್ ಮಾಜಿ ಅಧ್ಯಕ್ಷ ಕೆ.ಪಟಾಲಪ್ಪ, ಎಪಿಎಂಸಿ ಉಪಾಧ್ಯಕ್ಷ ಸುಧಾಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT