ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳಾ ಕಾರ್ಯಕರ್ತರು ಸಕ್ರಿಯವಾಗಬೇಕು’

ಜೆಡಿಎಸ್ ಮಹಿಳಾ ತಾಲ್ಲೂಕು ಘಟಕ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣ ಅಭಿಮತ
Last Updated 19 ಡಿಸೆಂಬರ್ 2018, 12:58 IST
ಅಕ್ಷರ ಗಾತ್ರ

ದೇವನಹಳ್ಳಿ: ಜೆಡಿಎಸ್ ಪಕ್ಷದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಜೆಡಿಎಸ್ ಮಹಿಳಾ ತಾಲ್ಲೂಕು ಘಟಕ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣ ತಿಳಿಸಿದರು.

ಇಲ್ಲಿನ ನಂದಗೋಕುಲ ಪಾರ್ಟಿ ಹಾಲ್‌ನಲ್ಲಿ ‘ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಪದಾಧಿಕಾರಿಗಳ ಚಿಂತನ ಮಂಥನ ಹಾಗೂ ಪುರಸಭೆ ಚುನಾವಣೆ ಸಿದ್ಧತೆ ಕುರಿತು ನಡೆದ ಸಭೆ’ಯಲ್ಲಿ ಅವರು ಮಾತನಾಡಿದರು.

ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಲು ಮುಖ್ಯಮಂತ್ರಿ ಬದ್ಧತೆ ಹೊಂದಿದ್ದಾರೆ. ಪಕ್ಷಕ್ಕೆ ನೈತಿಕ ಬಲ ತುಂಬಲು ದೇವನಹಳ್ಳಿ ವಿಧಾನ ಸಭೆ ವ್ಯಾಪ್ತಿಯಲ್ಲಿರುವ ವಿಜಯಪುರ ಮತ್ತು ದೇವನಹಳ್ಳಿ ಪುರಸಭೆಗೆ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಗೆಲುವು ಅನಿವಾರ್ಯ ಎಂದರು.

ಪ್ರತಿಯೊಂದು ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿಸಿಕೊಳ್ಳಬೇಕು. ಪುರಸಭೆ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ವಾರ್ಡ್‌ಗಳಲ್ಲಿ ಮಹಿಳಾ ಪದಾಧಿಕಾರಿಗಳು ಸಕ್ರಿಯವಾಗಬೇಕು. ಪ್ರತಿ ಮನೆಗೆ ತೆರಳಿ ಕುಮಾರಸ್ವಾಮಿ ಅವರ ಆಡಳಿತದ ಹೊಸ ಯೋಜನೆ ಬಗ್ಗೆ ಮತ್ತು ಆಗುವ ಅನುಕೂಲಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಬೇಕು ಎಂದರು.

ಜೆಡಿಎಸ್ ತಾಲ್ಲೂಕು ಘಟಕ ಅಧ್ಯಕ್ಷ ಬಿ.ಶ್ರೀನಿವಾಸ್ ಮಾತನಾಡಿ, ಪುರಸಭೆ ಚುನಾವಣೆಯ ನಂತರ ಲೋಕಸಭೆ ಚುನಾವಣೆ ಬರಲಿದೆ. ವಿಧಾನಸಭೆ ಚುನಾವಣೆಯಲ್ಲಿ ಈಗಾಗಲೇ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸುಮ್ಮನೆ ಕುಳಿತುಕೊಂಡರೆ ಪಕ್ಷ ಸಂಘಟನೆ ಆಗುವುದಿಲ್ಲ. ಪಕ್ಷದಲ್ಲಿ ಎಸ್ಸಿ, ಎಸ್ಟಿ ಘಟಕ, ಹಿಂದುಳಿದ ವರ್ಗಗಳ ಘಟಕಗಳು ಇವೆ. ಪಕ್ಷ ಸಂಘಟನೆ ಪಕ್ಷದಲ್ಲಿರುವ ಪ್ರತಿಯೊಂದು ಘಟಕದ ಜವಾಬ್ದಾರಿ, ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದರು.

ತಾಲ್ಲೂಕು ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಬಿ.ಪಿ.ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿ ಶೈಲಜಾ, ಜಿಲ್ಲಾ ಘಟಕದ ಕಾರ್ಯದರ್ಶಿ ಗೌರಮ್ಮ, ಪುರಸಭೆ ಮಾಜಿ ಉಪಾಧ್ಯಕ್ಷೆ ಪದ್ಮಾವತಮ್ಮ, ಜೆಡಿಎಸ್ ತಾಲ್ಲೂಕು ಘಟಕ ಕಾರ್ಯದರ್ಶಿ ಜಿ.ಎ.ರವೀಂದ್ರ, ಪ್ರಚಾರ ಸಮಿತಿ ತಾಲ್ಲೂಕು ಘಟಕ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್, ಯುವ ಘಟಕ ಅಧ್ಯಕ್ಷ ಭರತ್ ಕುಮಾರ್, ಮಾಹಿತಿ ತಂತ್ರಜ್ಞಾನ ಘಟಕ ಅಧ್ಯಕ್ಷ ಅನಿಲ್ ಯಾದವ್, ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಆಸೀಫ್ ಪ್ರಚಾರ ಸಮಿತಿ ಕಾರ್ಯಾಧ್ಯಕ್ಷ ಜಯರಾಮಯ್ಯ, ಮುಖಂಡರಾದ ಮುತ್ತು ಕುಮಾರ್, ಅನಿತಾ, ವರಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT