ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಗೃಹಲಕ್ಷ್ಮಿ’ಯಿಂದ ಮಹಿಳಾ ಸಬಲೀಕರಣ: ಕೆ.ಎನ್.ಅನುರಾಧ

Published 31 ಆಗಸ್ಟ್ 2023, 7:35 IST
Last Updated 31 ಆಗಸ್ಟ್ 2023, 7:35 IST
ಅಕ್ಷರ ಗಾತ್ರ

ಹೊಸಕೋಟೆ: ‘ಕುಟುಂಬ ನಿರ್ವಹಣೆಯಲ್ಲಿ ಮನೆಯ ಯಜಮಾನಿಯ ಪಾತ್ರ ಪ್ರಮುಖವಾದದ್ದು. ಆಕೆ ಆರ್ಥಿಕವಾಗಿ ಸಬಲವಾದಲ್ಲಿ ಇಡೀ ಕುಟುಂಬ ಸಬಲವಾದಂತೆ. ಆದ್ದರಿಂದ ಸರ್ಕಾರ ಮನೆ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದೆ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ.ಎನ್.ಅನುರಾಧ ಹೇಳಿದರು.

ತಾಲ್ಲೂಕಿನ ನಂದಗುಡಿ ಹೋಬಳಿಯ ಮುಗಬಾಳ ಗ್ರಾಮದಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಭಾ ಶರತ್ ಬಚ್ಚೇಗೌಡ, ಜಿ.ಪಂ ಎಸ್.ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕವಳೆ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಹೊಸಕೋಟೆ ತಾ.ಪಂ ಇ.ಒ ಚಂದ್ರಶೇಖರ್, ತಹಶೀಲ್ದಾರ್ ವಿಜಯಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ, ಮುಗಬಾಳ ಗ್ರಾ.ಪಂ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷೆ ನಾರಾಯಣಮ್ಮ, ತಾವರೆಕೆರೆ ಗ್ರಾ.ಪಂ ಅಧ್ಯಕ್ಷ ರಮೇಶ್, ಉಪಾಧ್ಯಕ್ಷೆ ಅಸ್ಮತ್, ಶಿವನಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಪದ್ಮ, ದೊಡ್ಡನಲ್ಲಾಳ ಗ್ರಾ.ಪಂ  ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಪ್ರಕಾಶ್, ತಾ.ಪಂ ಮಾಜಿ ಅಧ್ಯಕ್ಷ ಟಿ.ಎಸ್. ರಾಜಶೇಖರ್,  ಡಿ.ಟಿ.ವೆಂಕಟೇಶ್, ನಂಜಪ್ಪ, ಉದ್ಯಮಿಗಳಾದ ಕಲ್ಕೆರೆಕೆ.ಎಸ್, ಮಹದೇವಯ್ಯ, ಎಂ.ಮಂದೀಪ್‌ಗೌಡ, ಭೂನ್ಯಾಯ ಮಂಡಳಿ ಮಾಜಿ ಸದಸ್ಯ ನಾರಾಯಣಸ್ವಾಮಿ ಹಾಗೂ ಗ್ರಾ.ಪಂ. ಸದಸ್ಯರಾದ ಅಟ್ಟೂರು ರಮೇಶ್, ಶೋಭ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT