ಆನೇಕಲ್: ತಾಲ್ಲೂಕಿನ ಜಿಗಣಿ ಸಮೀಪದ ಹರಪನಹಳ್ಳಿ ಬೃಂದಾವನ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವು ಮೈಸೂರು ತಂಡವನ್ನು ಮಣಿಸಿ ಟ್ರೋಫಿ ಎತ್ತಿ ಹಿಡಿಯಿತು.

ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಬೃಂದಾವನ ಶಾಲೆ ಸಹಯೋಗದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕೋಲಾರ, ಚಿತ್ರದುರ್ಗ, ರಾಯಚೂರು ಸೇರಿದಂತೆ ಒಟ್ಟು 22 ತಂಡಗಳು ಭಾಗವಹಿಸಿದ್ದವು.

ಕರ್ನಾಟಕದಿಂದ ಹೆಚ್ಚು ಮಂದಿ ಕಬಡ್ಡಿ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಬೇಕು ಎಂಬುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಜಿಗಣಿಯಲ್ಲಿ ಮಹಿಳಾ ಕಬಡಿಯನ್ನು ಆಯೋಜಿಸಲಾಗಿದೆ ಎಂದು ಕಬಡ್ಡಿ ಪಟ್ಟು ಶೇಖರ್ ತಿಳಿಸಿದರು.

ಕಬಡ್ಡಿ ಆಟಗಾರ ರಮೇಶ್, ಹೊಸೂರು ವಿಧಾನಸಭಾ ಕ್ಷೇತ್ರದ ಶಾಸಕ ಪ್ರಕಾಶ್, ಬೃಂದಾವನ ಸಂಸ್ಥೆಯ ಪುಷ್ಪಲತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.