ಆನೇಕಲ್: ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ತಾಲ್ಲೂಕಿನ ಚೂಡಸಂದ್ರದಲ್ಲಿ ಪ್ರತಿಭಟನೆ ನಡೆಸಲಾಯಿತು.

2023ರಲ್ಲೇ ಈ ಮಸೂದೆ ಮಂಡನೆಯಾಗಿದ್ದರೂ ಮಹಿಳಾ ಮೀಸಲಾತಿ ಜಾರಿ ಮಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಸಬಲೀಕರಣಕ್ಕಿಂತ ಚುನಾವಣೆ ಗೆಲ್ಲುವುದು ಅತ್ಯಂತ ಮುಖ್ಯವಾಗಿದೆ ಎಂದು ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಡಾ.ಮೀನಾಕ್ಷಿ ದೂರಿದರು.

ಮಹಿಳೆಯರ ಮೇಲೆ ಕಾಳಜಿಯಿಲ್ಲದೇ ಸ್ವಹಿತಾಸಕ್ತಿಗಾಗಿ ಮಹಿಳಾ ಮೀಸಲು ಕಾಯ್ದೆಯನ್ನು ಜಾರಿ ಮಾಡುತ್ತಿಲ್ಲ. ಬಿಜೆಪಿ ಸರ್ಕಾರವು ಲೋಕಸಭಾ ಕ್ಷೇತ್ರಗಳ ಮರುವಿಂಗಡನೆ ಮಸೂದೆಯನ್ನು ಮಂಡಿಸಲು ಮಹಿಳೆಯರ ಮೀಸಲಾತಿ ಕಾಯ್ದೆಯನ್ನು ಮಂಡಿಸಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿಯನ್ನು ವಿರೋಧಿಸುವ ಸಲುವಾಗಿಯೇ ಕ್ಷೇತ್ರ ಮರುವಿಂಗಣೆ ಮಸೂದೆ ನೆಪದಲ್ಲಿ ಮಹಿಳಾ ಮೀಸಲಾತಿಯನ್ನು ಮುನ್ನಲೆಗೆ ತಂದಿತ್ತು. ಇದೊಂದು ಬಿಜೆಪಿಯ ರಾಜಕೀಯ ಕುತಂತ್ರದ ಭಾಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಜಶೇಖರ್ ರೆಡ್ಡಿ ಹೇಳಿದರು. ಮುಖಂಡರಾದ ರಮಾ ರಾಜಶೇಖರ ರೆಡ್ಡಿ, ಸ್ವಾತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-15-97583552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.