ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಮಹಿಳೆಯರ ಬೆಂಬಲ: ವಿಮಲಾ ಶಿವಕುಮಾರ್

ಮಹಿಳಾ ಮೋರ್ಚಾ ಪದಾಧಿಕಾರಿಗಳ ಪಟ್ಟಿ ಬಿಡುಗಡೆ
Last Updated 23 ಸೆಪ್ಟೆಂಬರ್ 2020, 2:43 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮಹಿಳೆಯರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ’ ಎಂದು ತಾಲ್ಲೂಕು ಬಿಜೆಪಿ ಮಹಿಳಾ ಮೋರ್ಚಾ ತಾಲ್ಲೂಕು ಘಟಕ ಅಧ್ಯಕ್ಷ ವಿಮಲಾ ಶಿವಕುಮಾರ್ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅತಿ ಹೆಚ್ಚು ವರ್ಷಗಳ ಕಾಲ ದೇಶದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಯಾವ ಯೋಜನೆಗಳನ್ನು ರೂಪಿಸಿ ಸ್ವಾವಲಂಬಿ ಬದುಕಿಗೆ ಬದ್ಧತೆ ತೋರಿಸಿದೆ ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರು. ಸೋನಿಯಾ ಗಾಂಧಿ ಈವರೆಗೆ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಮಹಿಳೆಯರ ಸಬಲೀಕರಣದ ಬಗ್ಗೆ ಚಕಾರ ಎತ್ತುತ್ತಿಲ್ಲ. ಕಳೆದ ಎರಡು ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುವ ಮೂಲಕ ಮಹಿಳೆಯರು ಯಾರ ಪರವಾಗಿದ್ದಾರೆ ಎಂಬುದಕ್ಕೆ ಉತ್ತರಿಸಿದ್ದಾರೆ’ ಎಂದರು.

‘ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗವೇಣಿ, ಬಿಜೆಪಿ ತಾಲ್ಲೂಕು ಘಟಕ ಅಧ್ಯಕ್ಷ ಸುಂದರೇಶ್, ಭೂ ಮಂಜೂರಾತಿ ಸಮಿತಿ ಸದಸ್ಯ ಬಿ.ಆರ್.ರಮೇಶ್, ಆವತಿ ಶಕ್ತಿ ಕೇಂದ್ರ ಅಧ್ಯಕ್ಷ ಬಿ.ಸಿ. ಸೋಮಶೇಖರ್, ಹಿಂದುಳಿದ ವರ್ಗಗಳ ಮೊರ್ಚಾ ತಾಲ್ಲೂಕು ಅಧ್ಯಕ್ಷ ಸುಜಯ್ ಕುಮಾರ್, ಯುವ ಮೊರ್ಚಾ ತಾಲ್ಲೂಕು ಅಧ್ಯಕ್ಷ ಮೋಹನ್, ಬಿಜ್ಜವಾರ ಶಕ್ತಿ ಕೇಂದ್ರ ಅಧ್ಯಕ್ಷ ಮನೋಜ್’ ಇದ್ದರು.

ಮಹಿಳಾ ಮೋರ್ಚಾ ಪದಾಧಿಕಾರಿಗಳು: ಬಿ.ಎಸ್.ವಿಮಲಾ ಶಿವಕುಮಾರ್ (ಅಧ್ಯಕ್ಷೆ), ಗೀತಾ ಮುನಿರಾಜ್, ರಜನಿ ಕನಕರಾಜ್, ನಾಗವೇಣಿ, ದಾಕ್ಷಾಯಣಿ (ಉಪಾಧ್ಯಕ್ಷರು). ಲಕ್ಷ್ಮೀ ಗೋಪಿ, ವಿನೋದ (ಪ್ರಧಾನ ಕಾರ್ಯದರ್ಶಿಗಳು), ದಾಕ್ಷಾಯಣಿ ಶ್ರಿಧರ್, ಗೌರಿಕೃಷ್ಣ, ಪ್ರಮೀಳಾ, ರಾಜಶ್ರೀ (ಕಾರ್ಯದರ್ಶಿಗಳು). ಚೈತ್ರಾ ಖಜಾಂಚಿ, ಕಾವ್ಯ, ಮಾಲಾ , ಗುಣಶೀಲ ಷಾಜಿಯಾ, ಭಾಗ್ಯ, ಮೇರಿ, ಲೀಲಾಯಾದವ್, ಭಾರತಿ, ಕೋಮಲ, ದಿವ್ಯ, (ಕಾರ್ಯಕಾರಿಣಿ ಸಮಿತಿ ಸದಸ್ಯರು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT