ಶನಿವಾರ, ಏಪ್ರಿಲ್ 4, 2020
19 °C

ಸ್ವಾವಲಂಬನೆಯ ಅವಕಾಶ ಸದುಪಯೋಗಪಡಿಸಿಕೊಳ್ಳಿ: ಅನಂತಕುಮಾರಿ ಚಿನ್ನಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಮಹಿಳೆಯರು ಸ್ವಾವಲಂಬಿಗಳಾಗಲು ಸಾಕಷ್ಟು ಅವಕಾಶಗಳಿವೆ. ಇವುಗಳನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಬೇಕಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಚಿನ್ನಪ್ಪ ಹೇಳಿದರು.

ಇಲ್ಲಿನ ದೇವರಾಜ ನಗರದ ಸರಸ್ವತಿ ಶಾಲೆಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಮಹಿಳೆಗೆ ಸರ್ಕಾರದಿಂದ ಹಲವಾರು ಸವಲತ್ತುಗಳು ದೊರೆಯುತ್ತಿವೆ. ಹೆಣ್ಣು ಮಕ್ಕಳು ಪದವಿ ಶಿಕ್ಷಣ ಪಡೆದು ಸ್ವಾವಲಂಬಿ ಬದುಕನ್ನು ಕಂಡುಕೊಳ್ಳಬೇಕು. ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ಇಂದು ಮರೆಯಾಗುತ್ತಿರುವ ಮೌಲ್ಯಗಳು ಸಂಸ್ಕಾರಗಳನ್ನೂ ಉಳಿಸಿ ಬೆಳೆಸಬೇಕು ತಂದೆ, ತಾಯಿ ಗುರು ಹಿರಿಯರನ್ನು ಗೌರವಿಸುವುದನ್ನು ರೂಡಿಸಿಕೊಳ್ಳಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎ.ಸುಬ್ರಹ್ಮಣ್ಯ,ಉಪಾಧ್ಯಕ್ಷ ಸ್ವರೂಪ್, ಆಡಳಿತ ಮಂಡಳಿ ಸದಸ್ಯೆ ನಯನಸ್ವರೂಪ್, ಮುಖ್ಯಶಿಕ್ಷಕ ಬಿ.ಕೆ.ಸಂಪತ್‍ಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು