ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ

ಶಿತಲೀಕರಣ ಘಟಕದ ಕಾಮಗಾರಿ ಪರಿಶೀಲಿಸಿ ಸಚಿವ ಸೂಚನೆ
Last Updated 7 ಸೆಪ್ಟೆಂಬರ್ 2020, 2:02 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಬಯಲು ಸೀಮೆಯ ರೈತರ ನೆರವಿಗಾಗಿ ನಿರ್ಮಾಣ ಮಾಡಲಾಗುತ್ತಿರುವ ವಿವಿಧ ಹಣ್ಣುಗಳ ದಾಸ್ತಾನು ಶೀತಲಿಕರಣ ಘಟಕದ ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳಿಸಿ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು .

ಇಲ್ಲಿನ ಪೂಜನಹಳ್ಳಿ ಬಳಿಯ ಶತಮಾನದ ಗಾಂಧಿ ತೋಟಗಾರಿಕಾ ಕ್ಷೇತ್ರದಲ್ಲಿ ₹ 24.6 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಲಾಗಿರುವ ಶಿತಲೀಕರಣ ಘಟಕದ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸವೀಪ ಶೀತಲೀಕರಣ ಘಟಕಕ್ಕೆ ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆ ವ್ಯಾಪ್ತಿಗಳಲ್ಲಿ ರೈತರು ಬೆಳೆಯುವ ದ್ರಾಕ್ಷಿ, ಬಾಳೆ, ಸಪೋಟ, ಮಾವು, ಹಲಸು ಮತ್ತು ವಿವಿಧ ತರಕಾರಿಗಳನ್ನು ದಾಸ್ತಾನು ಮಾಡಲು ಘಟಕ ನೆರವಾಗಲಿದೆ. ಮಾರುಕಟ್ಟೆಯಲ್ಲಿ ಬೆಲೆ ಏರುಪೇರು ಆದಾಗ ರೈತರಿಗೆ ನಷ್ಟವಾಗಬಾರದು ಎಂದು ಹೇಳಿದರು.

‘ದೇಶ ವಿದೇಶಗಳಿಗೆ ಸಂಸ್ಕರಿಸಿದ ಹಣ್ಣುಗಳು ಮತ್ತು ತರಕಾರಿಯನ್ನು ಗುಣಮಟ್ಟ ಆಧರಿಸಿ ರಪ್ತು ಮಾಡಲು ಹೆಚ್ಚಿನ ಅನುಕೂಲವಾಗಲಿದೆ. ಪ್ರತಿಯೊಂದು ಹಣ್ಣು ಮತ್ತು ತರಕಾರಿಗಳಿಗೆ ಪ್ರತ್ಯೇಕ ಶೀತಲೀಕರಣ ಘಟಕ ನಿರ್ಮಾಣ ಮಾಡಲಾಗುತ್ತಿದೆ. ವಾಹನಗಳ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ’ ಎಂದು ಹೇಳಿದರು.

ಕರ್ನಾಟಕ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಪ್ತು ನಿಗಮ ವ್ಯವಸ್ಥಾಪಕ ನಿರ್ದೇಶಕ ಶಿವರಾಜು ಮಾತನಾಡಿ, ‘ವಿವಿಧ ತರಕಾರಿಗಳು ಸೇರಿದಂತೆ ಪ್ರತಿಯೊಂದು ಹಣ್ಣುಗಳನ್ನು ಮಾಗಿಸಲು ಮತ್ತು ಕೆಲವೊಂದು ಸಂದರ್ಭದಲ್ಲಿ ದಾಸ್ತಾನು ಮಾಡಲು ಒಟ್ಟು ನಾಲ್ಕು ಎಕರೆ ಜಾಗದ ಪೈಕಿ 1.20 ಎಕರೆಯಲ್ಲಿ ಶೀತಲೀಕರಣ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಕೋವಿಡ್ 19ರ ಸೋಂಕಿನ ಸಂದರ್ಭದಲ್ಲಿ ಸಂಕಷ್ಟ ಏನು ಎಂಬುದು ರೈತರಿಗೆ ಈಗಾಗಲೆ ಅರಿವಾಗಿದೆ. ರೈತರ ಅನುಕೂಲಕ್ಕಾಗಿ ಶೀತಲಿಕರಣ ಘಟಕ ನಿರ್ಮಾಣವಾಗುತ್ತಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎನ್.ನಾಗರಾಜ್, ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಮುರಗೋಡ್, ಜಂಟಿಕೃಷಿ ನಿರ್ದೇಶಕ ಜಯಸ್ವಾಮಿ, ಉಪನಿರ್ದೇಶಕಿ ವಿನೂತ, ತಹಶೀಲ್ದಾರ್ ಅಜಿತ್ ಕುಮಾರ್ ರೈ, ಸಹಾಯಕ ಕೃಷಿ ನಿರ್ದೇಶಕಿ ವೀಣಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT