ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಗೆ ಕೋವಿಡ್‌ ದೃಢ

Last Updated 12 ಜೂನ್ 2020, 7:13 IST
ಅಕ್ಷರ ಗಾತ್ರ

ಆನೇಕಲ್:ತಾಲ್ಲೂಕಿನ ಚಿಂತಲಮಡಿವಾಳದ ಮಹಿಳೆಯೊಬ್ಬರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಗಿದೆ.

‘ಕೂಲಿ ಕೆಲಸ ಮಾಡುತ್ತಿದ್ದ 51 ವರ್ಷದ ಮಹಿಳೆಯನ್ನು ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಹಿಳೆಯ ಗಂಡ ಗಾರೆ ಕೆಲಸ ಮಾಡುತ್ತಿದ್ದು ವಿವಿಧ ಸ್ಥಳಗಳಲ್ಲಿ ಸಂಚರಿಸಿದ್ದಾರೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ 16 ಮಂದಿ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ 7 ಮಂದಿಯನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಜ್ಞಾನಪ್ರಕಾಶ್‌ ತಿಳಿಸಿದರು.

‘ಮಹಿಳೆಯ ಮನೆಯಿಂದ 100 ಮೀಟರ್‌ ವ್ಯಾಪ್ತಿಯ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು.

ತಹಶೀಲ್ದಾರ್‌ ಸಿ.ಮಹಾದೇವಯ್ಯ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ದೃಢಪಟ್ಟಿರುವುದರಿಂದ ಗ್ರಾಮಸ್ಥರು ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಸೀಲ್‌ಡೌನ್‌ ಪ್ರದೇಶದ ಕುಟುಂಬಗಳನ್ನು
ಹೊರ ಬಿಡುವಂತಿಲ್ಲ. ಇಲ್ಲಿಗೆ ಹೊರಗಿನವರನ್ನು ಬಿಡುವುದಿಲ್ಲ. ಈ ಪ್ರದೇಶದ ಜನರಿಗೆ ಅವಶ್ಯಕ ಸೌಲಭ್ಯಗಳನ್ನು ತಾಲ್ಲೂಕು ಆಡಳಿತದಿಂದ ಪೂರೈಸಲಾಗುವುದು. ಸೀಲ್‌ಡೌನ್‌ ಪ್ರದೇಶವನ್ನು ಹೊರತುಪಡಿಸಿ ಉಳಿದ ಭಾಗದ ಕುಟುಂಬಗಳು ಸಾಧ್ಯವಾದಷ್ಟು ಮನೆಯಲ್ಲಿ ಇರಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT