ಬಾಕಿ ವೇತನ, ಪಿಎಫ್‌ ನೀಡುವಂತೆ ಕಾರ್ಮಿಕರ ದೂರು

ಸೋಮವಾರ, ಮೇ 20, 2019
32 °C

ಬಾಕಿ ವೇತನ, ಪಿಎಫ್‌ ನೀಡುವಂತೆ ಕಾರ್ಮಿಕರ ದೂರು

Published:
Updated:
Prajavani

ದೊಡ್ಡಬಳ್ಳಾಪುರ: ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಸ್ಕಾಟ್ಸ್ ಗಾರ್ಮೆಂಟ್ಸ್ ಬಾಕಿ ಉಳಿಸಿಕೊಂಡಿರುವ ವೇತನ ಮತ್ತು ಪಿಎಫ್ ನೀಡಬೇಕೆಂದು ನೂರಾರು ಜನ ಕಾರ್ಮಿಕರು ಗುರುವಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದರು.

ಈ ಬಗ್ಗೆ ಮಾಹಿತಿ ನೀಡಿದ ಕಾರ್ಮಿಕ ಮುಖಂಡರು, ‘ಈ ಕಾರ್ಖಾನೆಯಲ್ಲಿ 5 ವರ್ಷಗಳಿಂದ ದುಡಿದ್ದೇವೆ. 7 ತಿಂಗಳಿಂದ ಕಾರ್ಖಾನೆ ಬಾಗಿಲು ಮುಚ್ಚಿದೆ. ಆದರೆ, 3 ತಿಂಗಳ ಸಂಬಳ, ಪಿಎಫ್ ಸೇರಿದಂತೆ ಯಾವುದೇ ಬಾಕಿ ನೀಡದ ಕಾರಣ ನೂರಾರು ಕಾರ್ಮಿಕರು ತೀವ್ರ ತೊಂದರೆಗೆ ಒಳಗಾಗಿದ್ದಾರೆ’ ಎಂದು ತಿಳಿಸಿದರು.

ಈ ಹಿಂದೆಯೂ ಸಂಬಳ ಹಾಗೂ ಪಿಎಫ್‍ಗಾಗಿ ಹಲವು ಬಾರಿ ಪ್ರತಿಭಟನೆ ನೆಡಸಿದ್ದು ಪೊಲೀಸರು ಕಾರ್ಖಾನೆ ಮುಖ್ಯಸ್ಥರೊಂದಿಗೆ ಮಾತನಾಡಿ ಬಾಕಿ ವೇತನ ಕೊಡುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಗಿತ್ತು. ಆದರೆ, ಪೊಲೀಸ್ ಅಧಿಕಾರಿಗಳ ಮಾತಿಗೂ ಮನ್ನಣೆ ನೀಡದ ಮಾಲೀಕರು ಬೇಜವಾಬ್ದಾರಿ ತೋರಿದ್ದಾರೆ. ಕೂಡಲೇ ಬಾಕಿ ವೇತನ ಕೊಡಿಸಿ ಕಾರ್ಮಿಕರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !