ದೊಡ್ಡಬಳ್ಳಾಪುರ: ತಾಲ್ಲೂಕಿನ ಹಣಬೆ ಮೂಲಕ ಹಾದು ಹೋಗುತ್ತಿರುವ ಎತ್ತಿನಹೊಳೆ ಪೈಪ್ ಅಳವಡಿಕೆ ಕಾಮಗಾರಿ ನಡೆಯುವ ಸಮಯದಲ್ಲಿ ಶುಕ್ರವಾರ ಮಣ್ಣು ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಪ್ರಕರಣ ನಡೆದಿದೆ.
ಮಣ್ಣಿನಡಿ ಸಿಲುಕಿ ಮೃತಪಟ್ಟ ಯುವಕನನ್ನು ಬಿಹಾರ ರಾಜ್ಯದ ಚಿಲ್ಟುಕುಮಾರ್ (22) ಎಂದು ಗುರುತಿಸಲಾಗಿದೆ. ಘಟನ ಸ್ಥಳಕ್ಕೆ ಡಿವೈಎಸ್‌ಪಿ ರವಿ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಎಂ.ಬಿ.ನವೀನ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.