ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಂತ ಊರುಗಳಿಗೆ ತೆರಳಿದ ಕಾರ್ಮಿಕರು

Last Updated 28 ಏಪ್ರಿಲ್ 2021, 6:03 IST
ಅಕ್ಷರ ಗಾತ್ರ

ಆನೇಕಲ್: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಂಗಳವಾರ ರಾತ್ರಿಯಿಂದ ಕರ್ಫ್ಯೂ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ತೆರಳುವ ಕಾರ್ಮಿಕರು, ಕುಟುಂಬಗಳ ಸಂಖ್ಯೆ ಗಡಿಭಾಗ ಅತ್ತಿಬೆಲೆಯಲ್ಲಿ ಹೆಚ್ಚಾಗಿ ಕಂಡು ಬಂದಿತು.

ಗುಂಪು ಗುಂಪುಗಳಲ್ಲಿ ಜನರು ಲಗ್ಗೇಜ್‌ಗಳೊಂದಿಗೆ ಅತ್ತಿಬೆಲೆ ಗಡಿಯಲ್ಲಿ ಸಾಗುತ್ತಿದ್ದ ದೃಶ್ಯ ಬೆಳಗ್ಗೆಯಿಂದಲೂ ಕಂಡು ಬಂದಿತು. ಹೊಸೂರು, ಕೃಷ್ಣಗಿರಿ, ಧರ್ಮಪುರಿ ಸೇರಿದಂತೆ ತಮಿಳುನಾಡಿನ ವಿವಿಧೆಡೆಗೆ ತೆರಳುವ ಬಸ್‌ಗಳು ಅತ್ತಿಬೆಲೆಯಲ್ಲಿ ಬಂದು ನಿಲ್ಲುತ್ತಿದ್ದಂತೆ ಜನಜಂಗುಳಿ ಕೆಲವೇ ನಿಮಿಷಗಳಲ್ಲಿ ತುಂಬುತ್ತಿದ್ದ ದೃಶ್ಯ ಕಂಡು ಬಂದಿತು.

ಖಾಸಗಿ ಬಸ್‌ಗಳು, ಟಿಟಿಗಳು ಮತ್ತು ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಇದರಿಂದ ಕರ್ನಾಟಕದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬೃಹತ್‌ ಸಂಖ್ಯೆಯ ಜನರಿಗೆ ಉಪಯುಕ್ತವಾಯಿತು.

ತಾಲ್ಲೂಕಿನಲ್ಲಿ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಪೊಲೀಸರು ಎಲ್ಲೆಡೆ ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದು ಗಡಿಭಾಗಗಳಲ್ಲಿ ನಾಕಬಂಧಿಯನ್ನು ಹಾಕಿರುವುದು ಕಂಡು ಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT