ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ 2024 ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಗು ಜನಿಸಿದ ಒಂದು ಗಂಟೆಯೊಳಗೆ ತಾಯಿ ಎದೆ ಹಾಲು ಮಗುವಿಗೆ ಕುಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಎದೆ ಹಾಲುಣಿಸುವುದರಿಂದ ಮಗುವಿನ ಆರೋಗ್ಯ ಹಾಗೂ ತಾಯಿ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.