ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಸ್.ಘಾಟಿ (ಮೇಲಿನ ಜೂಗನಹಳ್ಳಿ) ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ರಾಷ್ಟ್ರೋತ್ಥಾನ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎಂ.ನಾಗರಾಜ್, ‘ಗಿಡಗಳನ್ನು ನೆಡುವ ಕೆಲಸವನ್ನು ಎಲ್ಲರು ಮಾಡುತ್ತಾರೆ. ಆದರೆ ನೆಟ್ಟ ಗಿಡಗಳನ್ನು ಉಳಿಸುವುದು ಬೆಳೆಸುವುದು ಸಹ ಪ್ರಮುಖ. ಹಾಗೆಯೇ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಇತರ ಅನುಷ್ಠಾನ ಇಲಾಖೆಯವರು ಪ್ರತಿಯೊಬ್ಬ ರೈತರಿಗೂ ನರೇಗಾ ಯೋಜನೆಯ ಮೂಲಕ ಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಲು ಮಾಹಿತಿ ನೀಡಬೇಕು. ಮಳೆ ಹೆಚ್ಚಾಗಿ ಅಂತರ್ಜಲ ಮಟ್ಟ ಹೆಚ್ಚಾಗಲು ಮರಗಳ ಪಾತ್ರ ಮಹತ್ವವಾದದ್ದು’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ಮಾತನಾಡಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಜಾಗಗಳಲ್ಲಿ ಗುಂಡುತೋಪು ಸ್ಮಶಾನ,ಸರ್ಕಾರಿ ಆಸ್ಪತ್ರೆ ಜಾಗದಲ್ಲಿ ಪ್ರತಿ ಗ್ರಾಮ ಪಂಚಾಯಿತಿಯ ಕನಿಷ್ಠ ಐದುನೂರು ಸಸಿಗಳನ್ನು ನೆಟ್ಟು ಪೋಷಿಸುವಂತೆ ಸೂಚಿಸಲಾಗಿದೆ’ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ವಲಯ ಅರಣ್ಯ ಅಧಿಕಾರಿ ಭಾಸ್ಕರ್, ತಾಲ್ಲೂಕು ಅರಣ್ಯ ಅಧಿಕಾರಿ ಲಷ್ಕರ್ ನಾಯಕ್, ಸಾಮಾಜಿಕ ಅರಣ್ಯ ಅಧಿಕಾರಿ ಲಕ್ಷ್ಮೀನಾರಾಯಣ್, ರಾಷ್ಟ್ರೋತ್ಥಾನ ಪರಿಷತ್ತಿನ ಸದಸ್ಯ ಜೀವನ್ಕುಮಾರ್, ಚಂದ್ರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಭೈರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.