ಶನಿವಾರ, ಜುಲೈ 31, 2021
28 °C

‘ಪರಿಸರ ಕಾಪಾಡಲು ಗಿಡ-ಮರ ಬೆಳೆಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಗಿಡ ಮರಗಳು ಪರಿಸರದ ಜೀವನಾಡಿಗಳು. ಪರಿಸರದ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಎಲ್ಲೆಡೆ ಗಿಡ ಮರಗಳನ್ನು ಬೆಳೆಸುವ ಪರಿಪಾಠ ಬೆಳೆಸಬೇಕಾಗಿದೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಎಲ್.ವೈ.ರಾಜೇಶ್‌ ತಿಳಿಸಿದರು.

ಅವರು ತಾಲ್ಲೂಕಿನ ತಿಂಡ್ಲು ಗ್ರಾಮದಲ್ಲಿ ರಾಜಲಾಂಛನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮರ ಗಿಡಗಳು ಮನುಷ್ಯನಿಗೆ ಶುದ್ಧ ಗಾಳಿ ನೀಡುತ್ತವೆ. ನೆರಳು, ಹಣ್ಣು ನೀಡಿ ನೆರವಾಗುತ್ತಿವೆ. ಆದರೆ ಮನುಷ್ಯ ದುರಾಸೆಯಿಂದ ಪರಿಸರವನ್ನು ಹಾಳುಮಾಡಿ ನಾಶ ಮಾಡುತ್ತಿದ್ದಾನೆ. ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರದ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದರು.

‘ಅರಣ್ಯ ನಾಶದಿಂದ ಜೀವ ಸಂಕುಲಕ್ಕೆ ಮುಂದಿನ ದಿನಗಳಲ್ಲಿ ಅಪಾಯವಿದೆ. ಹಾಗಾಗಿ ಅರಣ್ಯ ನಾಶ ತಡೆಯಬೇಕು. ಸುತ್ತಮುತ್ತಲಿನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದರು.

ರಾಜಲಾಂಛನ ಸಂಸ್ಥೆಯ ಅಧ್ಯಕ್ಷ ನರಸಿಂಹಮೂರ್ತಿ, ಪದಾಧಿಕಾರಿಗಳಾದ ರಾಘವೇಂದ್ರರೆಡ್ಡಿ, ತೆಲಗರಹಳ್ಳಿ ಗಣೇಶ್, ತ್ರಿಪುರ ಸುಂದರಿ, ವಿನಯ್‌ ದಂಡಗಿ, ಎಚ್.ಎ.ಶೇಖರ್‌, ಮಂಜು, ಸೋಮಶೇಖರ್‌, ಮಂಜುನಾಥ್‌, ನಂದಿ, ರಾಧಿಕಾ, ರೋಹಿಣಿ, ಗೀತಾ, ಲಿಂಗರಾಜು, ಮಹೇಶ್‌, ಜಯಸೂರ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.