ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಲು ಸಲಹೆ

ದೊಡ್ಡಬಳ್ಳಾಪುರ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
Last Updated 22 ಅಕ್ಟೋಬರ್ 2020, 4:16 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯದ ಕಡೆಗೂ ಜನರು ಒತ್ತು ನೀಡಬೇಕಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಡಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಜಗತ್ತಿನಲ್ಲಿ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ. ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕಿದೆ ಎಂದು ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ.ಶಾಂತಲಾ ಮಾತನಾಡಿ, ‘ಎಲ್ಲರಿಗೂ ಮಾನಸಿಕ ಆರೋಗ್ಯ; ಇದಕ್ಕಾಗಿ ಹೆಚ್ಚಿನ ಹೂಡಿಕೆ-ಚಿಕಿತ್ಸೆಗೆ ಅವಕಾಶ’ ಎಂಬ ಘೋಷ ವಾಕ್ಯದಡಿ ಇಡೀ ವಿಶ್ವದಾದ್ಯಂತ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಅಮಲಿನಾಯಕ್, ಜಿಲ್ಲಾ ಮಾನಸಿಕ ರೋಗ ತಜ್ಞ ಡಾ.ಗಿರೀಶ್, ಕ್ರಾಪ್ಟಿಜನ್‌ ಫೌಂಡೇಷನ್ ಸಿಇಒ ಮಯೂರ, ಆರೋಗ್ಯ ಇಲಾಖೆಯ ಸುಮಾ, ಕರಿಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT