ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಸಾತನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಮಾನಸ.ಬಿ.ಆರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸುಜಾತಾ ಎಸ್.ಎಲ್. ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಒಟ್ಟು 11 ಸದಸ್ಯರನ್ನು ಹೊಂದಿರುವ ಪಂಚಾಯಿತಿಯಲ್ಲಿ ಮಾನಸ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಜೆಜೆಎಂ ಯೋಜನೆಯಡಿ ಸಾತನೂರು ಮತ್ತು ಶ್ರೀನಿವಾಸಪುರದಲ್ಲಿ ಪೈಪ್ಲೈನ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ಹೊಸಹಳ್ಳಿಯಲ್ಲಿ ಅಂತಿಮ ಹಂತದಲ್ಲಿದೆ. ಕಾಮಗಾರಿ ಪೂರ್ಣಗೊಂಡ ತಕ್ಷಣ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ಮಾನಸ ತಿಳಿಸಿದರು.

ನೂತನ ಪಂಚಾಯಿತಿ ಕಟ್ಟಡ ನಿರ್ಮಾಣ, ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಕಸದ ಸಮಸ್ಯೆ ನಿವಾರಣೆ ಮತ್ತು ನೈರ್ಮಲ್ಯ ಕಾಪಾಡುವಂತಹ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-4-16405039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.