ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 12 ರಿಂದ 18 ರವರೆಗೆ ಯೋಗ ಶಿಬಿರ

Last Updated 28 ಮೇ 2019, 13:45 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ವಿಶ್ವ ಯೋಗ ದಿನಾಚರಣೆಯನ್ನು ಜೂನ್‌ 21ರಂದು ನಗರದ ಭಗತ್‍ಸಿಂಗ್ ಕ್ರೀಡಾಂಗಣದಲ್ಲಿ ವಿಶಿಷ್ಟವಾಗಿ ಆಯೋಜಿಸಲಾಗುತ್ತಿದೆ. ಅದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ವಿಶ್ವ ಯೋಗ ದಿನಾಚರಣೆ ಟ್ರಸ್ಟ್ ಗೌರವ ಅಧ್ಯಕ್ಷ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ಹೇಳಿದರು.

ಟ್ರಸ್ಟ್ ವತಿಯಿಂದ ನಗರದ ರಾಮಾಂಜನೇಯ ಕಲ್ಯಾಣ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಯೋಗದಿಂದ ದೇಹಕ್ಕೆ ಹಾಗೂ ಮನಸ್ಸಿಗೆ ಚೈತನ್ಯ ತಂದುಕೊಡುವ ಮೂಲಕ ಕೆಲಸ ಮಾಡಲು ಚೈತನ್ಯ ದೊರೆಯುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಬೇಕಾದ ಏಕಾಗ್ರತೆ ಹಾಗೂ ಉತ್ಸಾಹ ಯೋಗದಿಂದ ದೊರೆಯುತ್ತದೆ’ ಎಂದರು.

21ರಂದು ನಡೆಯುವ ವಿಶ್ವ ಯೋಗ ದಿನಾಚರಣೆಯ ಶಿಷ್ಟಾಚಾರದಂತೆ ಸರಳ ಯೋಗಾಸನಗಳನ್ನು ಹೇಳಿಕೊಡಲಾಗುವುದು. ಕಾರ್ಯಕ್ರಮ ಬೆಳಿಗ್ಗೆ 6ಕ್ಕೆ ಆರಂಭವಾಗುತ್ತದೆ. ಯೋಗ ಪ್ರದರ್ಶನ, ಅತಿಥಿಗಳಿಂದ ಭಾಷಣ, ಯೋಗ ಪಟುಗಳಿಗೆ ಸನ್ಮಾನವಿದೆ. ಎಲ್ಲ ವಯೋಮಾನದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗದ ಮಹತ್ವವನ್ನು ಅರಿಯಬೇಕು’ ಎಂದರು.

ವಿಶ್ವ ಯೋಗ ದಿನಾಚರಣೆ ಸಮಿತಿ ಅಧ್ಯಕ್ಷ ಹಾಗೂ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಮಾತನಾಡಿ, ‘ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುವ ಸುಮಾರು ಐದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೂರ್ವಭಾವಿ ಸಭೆಗಳನ್ನು ನಡೆಸಿ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಕರಪತ್ರಗಳು, ಬ್ಯಾನರ್‌ಗಳ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಹೆಚ್ಚಿನ ಪ್ರಚಾರ ಕೈಗೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

‘ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಕಾಲೇಜುಗಳಿಗೆ ಪತ್ರಗಳನ್ನು ಕಳುಹಿಸಲಾಗುವುದು. ಫ್ಲೆಕ್ಸ್‌ ಮುಖಾಂತರ ಪ್ರಚಾರ ಕೈಗೊಳ್ಳಲು ಸಂಘಟನೆಗಳಿಗೆ ಮನವಿ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು. ನಗರಸಭೆ, ಯುವಜನ ಕ್ರೀಡಾ ಇಲಾಖೆ ಸಹಕಾರ ನೀಡಲಿದೆ. ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಭಾಗವಹಿಸುವವರು ಬಿಳಿ ಬಣ್ಣದ ಉಡುಪುಗಳನ್ನು ಧರಿಸಿ ಬರಬೇಕು’ ಎಂದು ಮನವಿ ಮಾಡಿದರು.

ಯೋಗ ಮತ್ತು ಪ್ರಾಣಾಯಾಮ ಶಿಬಿರ: ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಯೋಗ ತರಬೇತಿ ನೀಡಲು ಜೂನ್‌ 12ರಿಂದ 18 ರವರೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯೋಗ ಶಿಬಿರ ನಡೆಸಲಾಗುವುದು. ಬೆಳಿಗ್ಗೆ 6 ರಿಂದ 7.15ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಎಲ್ಲ ವಯೋಮಾನದವರು ಭಾಗವಹಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ, ತಾಲ್ಲೂಕುನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ಬಿ.ಜಿ.ಅಮರನಾಥ್, ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ಉಪಾಧ್ಯಕ್ಷ ಡಾ.ಎಚ್.ಜಿ.ವಿಜಯಕುಮಾರ್, ಕಾರ್ಯದರ್ಶಿ ವಿ.ಲೋಕೇಶ್‌ಮೂರ್ತಿ, ಖಜಾಂಚಿ ಪಿ.ಕೆ.ಶ್ರೀನಿವಾಸ್, ಗಿರೀಶ್ ಹಾಗೂ ಸಮಿತಿ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT