ಭಾನುವಾರ, ಜನವರಿ 19, 2020
26 °C

ಯೋಗಸಮಿತಿ ದಶಮಾನೋತ್ಸವ ಡಿ.22ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಇಲ್ಲಿನ ಸ್ವಾಮಿ ವಿವೇಕಾನಂದ ಯೋಗ ಶಿಕ್ಷಣ ಸಮಿತಿಯ ದಶಮಾನೋತ್ಸವವನ್ನು ಡಿ. 22 ರಂದು ನಡೆಸುವುದಾಗಿ ಯೋಗಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿ.ಜಯರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳ ಪ್ರಮುಖರಾದ ಕೇಶವ ಹೆಗಡೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಯೋಗ ಪಟುಗಳಿಂದ ಯೋಗ ಪ್ರದರ್ಶನ ನಡೆಯಲಿದೆ. ‘ಯೋಗ ದರ್ಶನ’ ವಿಶೇಷ ಸಂಚಿಕೆ ಬಿಡುಗಡೆ ಮಾಡಲಾಗುವುದು. ಕಾರ್ಯಕ್ರಮವು ಸ್ವಾಮಿ ವಿವೇಕಾನಂದ ವಿದ್ಯಾ ಕೇಂದ್ರದ ಆವರಣದಲ್ಲಿ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಶಂಕರ್ ನಿಕ್ಕಂ, ಯೋಗ ಶಿಕ್ಷಕರಾದ ನಾಗರಾಜ್, ಚಂದ್ರು, ಆನಂದ್ ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು