ಮಂಗಳವಾರ, ಮಾರ್ಚ್ 28, 2023
31 °C
ರಾಮಕೃಷ್ಣಾಪುರದ ಪ್ರಸನ್ನ ವೆಂಕಟೇಶ್ವರ ರಥೋತ್ಸವ

ಆನೇಕಲ್‌ನಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಪಟ್ಟಣದ ಗುರೂಜಿ ವಿದ್ಯಾನಿಕೇತನ ಶಾಲೆಯಲ್ಲಿ ರಥ ಸಪ್ತಮಿಯನ್ನು ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡುವ ಮೂಲಕ ಆಚರಿಸಿದರು.

ಶಾಲೆಯ 650 ವಿದ್ಯಾರ್ಥಿಗಳು 45 ದಿನಗಳಿಂದ ಪ್ರತಿದಿನ ಸೂರ್ಯ ನಮಸ್ಕಾರ ಮಾಡುತ್ತಿದ್ದರು. ರಥ ಸಪ್ತಮಿ ದಿನವಾದ ಈ ದಿನಕ್ಕೆ ಒಟ್ಟು 1,53,400 ಸೂರ್ಯ ನಮಸ್ಕಾರ ಮಾಡುವ ಮೂಲಕ ಸೂರ್ಯ ದೇವರಿಗೆ ಭಕ್ತಿ ಸಮರ್ಪಿಸಿದರು.

ಸಂಸ್ಥೆ ಅಧ್ಯಕ್ಷ ಎಂ. ಚಂದ್ರಶೇಖರ್‌ ಮಾತನಾಡಿ, ಯೋಗದ ಮೂಲಕ ಆರೋಗ್ಯಯುತ ಜೀವನ ನಡೆಸಲು ಸಾಧ್ಯದೆ  ಮನಸ್ಸನ್ನು ನಿಯಂತ್ರಿಸಿ ಏಕಾಗ್ರತೆ ಬೆಳೆಸುತ್ತದೆ. ಜ್ಞಾಪಕ ಶಕ್ತಿ ಹೆಚ್ಚಿಸಿಕೊಳ್ಳಲು ಹಲವಾರು ಯೋಗಾಸನಗಳನ್ನು ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ಸೂರ್ಯ ನಮಸ್ಕಾರವು ಹಲವು ಯೋಗಾಸನಗಳ ಸಂಯೋಗವಾಗಿದೆ. ಮಾನಸಿಕ ಆರೋಗ್ಯ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಉಪಯುಕ್ತವಾಗಿದೆ. ಸೂರ್ಯ ಪಥ ಬದಲಾಯಿಸುವ ಈ ದಿನ ಪವಿತ್ರವಾದುದು ಎಂದರು.

ಸಂಸ್ಥೆಯ ಖಜಾಂಚಿ ಗೋಪಾಲಕೃಷ್ಣ ಇದ್ದರು.

ಬ್ರಹ್ಮ ರಥೋತ್ಸವ: ತಾಲ್ಲೂಕಿನ ರಾಮಕೃಷ್ಣಾಪುರದ ಪ್ರಸನ್ನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ರಥ ಸಪ್ತಮಿ ಪ್ರಯುಕ್ತ ಬ್ರಹ್ಮ ರಥೋತ್ಸವ ನಡೆಯಿತು.

ರಥೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು