ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೀಪಿಸ್‌ ಪಟ್ಟಿಯಿಂದ ಹೊಡೆದು ಯುವಕನ ಹತ್ಯೆ

Published 4 ಏಪ್ರಿಲ್ 2024, 7:33 IST
Last Updated 4 ಏಪ್ರಿಲ್ 2024, 7:33 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಹೆಬ್ಬಗೋಡಿಯ ಮುತ್ಯಾಲಮ್ಮ ದೇವಾಲಯದ ಸಮೀಪ ವ್ಯಕ್ತಿಯೊಬ್ಬರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಒಡಿಶಾ ಮೂಲದ ದೀಪ್ತಿರಂಜನ್‌ ಜೆನಾ (22) ಎಂದು ಗುರುತಿಸಲಾಗಿದೆ. ಜೆನಾ ಅವರು ವೀರಸಂದ್ರದ ಡಿನೋ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾದ್ದರು ಎನ್ನಲಾಗಿದೆ. 

ಜೆನಾ ಅವರ ಮನೆಯ ಸಮೀಪದಲ್ಲೇ ದುಷ್ಕರ್ಮಿಗಳು ವಾಸವಾಗಿದ್ದು, ರೀಪಿಸ್ ಪಟ್ಟಿಯಿಂದ ಜೆನಾ ಅವರ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಇನ್‌ಸ್ಪೆಕ್ಟರ್‌ ಐಯನ್‌ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT