ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಈಚೆಗೆ ಕೆಲಸ ಬಿಟ್ಟು ಹಸು ಮೇಯಿಸುತ್ತ ಗ್ರಾಮದಲ್ಲೇ ಉಳಿದಿದ್ದ. ಇದರ ನಡುವೆ ಸಾಲ ಮಾಡಿ ದ್ವಿಚಕ್ರ ವಾಹನ ಖರೀದಿಸಿದ್ದ. ಪೋಷಕರು ಈ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಬೇಸತ್ತು ಹಸು ಮೇಯಿಸಲು ತೆರಳಿದ್ದ ವೇಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.