ಭಾನುವಾರ, ಸೆಪ್ಟೆಂಬರ್ 25, 2022
30 °C
ಗ್ರಾಮೀಣ ಮಾಸಿಕ ಸಂತೆಯಲ್ಲಿ ತಾ.ಪಂ. ಇಒ

ದುರ್ಬಲ ವರ್ಗಕ್ಕೆ ಶೂನ್ಯ ಬಡ್ಡಿ ಸಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೂಬಗೆರೆ (ದೊಡ್ಡಬಳ್ಳಾಪುರ): ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಸಂಘಗಳಿಗೆ ಅಗತ್ಯವಿರುವ ಅನುದಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ₹5.5 ಕೋಟಿ ಅನುದಾನ ನೀಡಲಾಗಿದೆ. ಯೋಜನೆಯಡಿ ನಿರ್ದಿಷ್ಟ ಉದ್ದೇಶಗಳಿಗೆ ಕಡಿಮೆ ಬಡ್ಡಿದರದಲ್ಲಿ ₹1.5 ಸಾಲ ಸೌಲಭ್ಯ ಮತ್ತು ದುರ್ಬಲ ವರ್ಗದವರಿಗೆ ಶೂನ್ಯ ಬಡ್ಡಿಯ ಸಾಲದ ಸೌಲಭ್ಯ ದೊರೆಯಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಹೇಳಿದರು.

ತಾಲ್ಲೂಕಿನ ಮೇಳೇಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ್ದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವ ಮತ್ತು ಯೋಜನೆಯ ಅರಿವು ಮೂಡಿಸುವ ಸಲುವಾಗಿ ಹಮ್ಮಿಕೊಂಡಿದ್ದ ಗ್ರಾಮೀಣ ಮಾಸಿಕ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿ 1371 ಸ್ವಸಹಾಯ ಸಂಘಗಳು ರಚಿಸಲಾಗಿದೆ. ಸುಮಾರು 17 ಸಾವಿರ ಮಹಿಳೆಯರು ಸಂಘಗಳಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ವಸಹಾಯ ಸಂಘಗಳ ಮಹಿಳೆಯರು ಸಾಲ ಸೌಲಭ್ಯ ಪಡೆದು ಹೈನುಗಾರಿಕೆ, ಉಪ್ಪಿನಕಾಯಿ, ಹಪ್ಪಳ, ಮಡಿಕೆ, ಹಾರಗಳ ತಯಾರಿಕೆ,ಹಣಬೆ ಬೇಸಾಯ, ಬ್ಯೂಟಿಷಿನ್, ಟೈಲರಿಂಗ್ ಒಳಗೊಂಡು, ಆದಾಯ ಬರುವ ಚಟುವಟಿಕೆ ಹಮ್ಮಿಕೊಳ್ಳಬಹುದು ಎಂದರು.

ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ವಿಠಲ್ ಕಾವಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಹೆಚ್ಚಿನ ಮಹಿಳೆಯರು ಸ್ವಸಹಾಯ ಸಂಘ ರಚಿಸಿಕೊಂಡು ಯೋಜನೆಯಡಿ ದೊರೆಯುವ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಸದೃಢರಾಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮೆಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಮುನಿರಾಜು, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ರಾಮಾಂಜನೇಯ, ಪಿಡಿಓ ಗಂಗಬೈರಪ್ಪ, ಒಕ್ಕೂಟದ ಅಧ್ಯಕ್ಷರಾದ ಮಂಜುಳ, ಜಿಲ್ಲಾ ಪಂಚಾಯಿತಿ ಎನ್.ಆರ್.ಎಲ್.ಎಂ ವ್ಯವಸ್ಥಾಪಕಿ ಎಂ.ಮಂಜುಳ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಎಂ.ಬಿ.ಕೆಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು